Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:3 - ಕನ್ನಡ ಸಮಕಾಲಿಕ ಅನುವಾದ

3 “ಆತ್ಮದಲ್ಲಿ ಬಡವರಾಗಿರುವವರು ಧನ್ಯರು, ಪರಲೋಕ ರಾಜ್ಯವು ಅವರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕರಾಜ್ಯವು ಅವರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಆತ್ಮಿಕತೆಯಲ್ಲಿ ಬಡವರಾಗಿರುವವರು ಧನ್ಯರು. ಪರಲೋಕರಾಜ್ಯ ಅವರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 “ಜೆ ಕೊನಾಕ್ ಅಪ್ನಿ ಆತ್ಮಿಕ್ ರಿತಿನ್ ಗರಿಬ್ ಹಾತ್ ಮನುನ್ ಗೊತ್ತ್ ಹಾಯ್ ತೆನಿ ಸುಖಿ; ಸರ್‍ಗಾಚೆ ರಾಜ್ ತೆಂಚೆಚ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:3
55 ತಿಳಿವುಗಳ ಹೋಲಿಕೆ  

ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು.


ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ; ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.


ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳುವದಕ್ಕಿಂತ, ದೀನರೊಂದಿಗೆ ದೀನ ಆತ್ಮವುಳ್ಳವರಾಗಿ ಇರುವುದು ಉತ್ತಮ.


“ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.


ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.


ಓ ದೇವರೇ, ನಿಮಗೆ ಇಷ್ಟವಾದ ಯಜ್ಞಗಳು ಮುರಿದ ಆತ್ಮವೇ. ಮುರಿದಂಥ, ಜಜ್ಜಿದಂಥ ಹೃದಯವನ್ನು ದೇವರು ತಿರಸ್ಕರಿಸುವುದಿಲ್ಲ.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು,


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವವರು ಧನ್ಯರು.


ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ,


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


ಯೇಸು ಅದನ್ನು ಕಂಡಾಗ ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.


ಆದರೆ ನಿಮ್ಮ ಕಣ್ಣುಗಳು ಕಾಣುವುದರಿಂದಲೂ ನಿಮ್ಮ ಕಿವಿಗಳು ಕೇಳುವುದರಿಂದಲೂ ನೀವು ಧನ್ಯರು.


ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಯಾಕೋಬನ ದೇವರನ್ನು ತಮ್ಮ ಸಹಾಯಕರಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಯೆಹೋವ ದೇವರ ಮೇಲೆ ನಿರೀಕ್ಷೆ ಇಡುವನು.


ಮನಸ್ಸೆಯು ಬಾಧೆಯಲ್ಲಿರುವಾಗ ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಂಡನು ಮತ್ತು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಪ್ರಾರ್ಥನೆಮಾಡಿದನು.


ಬಡವರನ್ನು ಪರಾಮರಿಸುವವರು ಧನ್ಯರು; ಕೇಡಿನ ಸಮಯದಲ್ಲಿ ಯೆಹೋವ ದೇವರು ಅವರನ್ನು ತಪ್ಪಿಸುವರು.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ಆಮೋನನು ತನ್ನ ತಂದೆ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ, ಯೆಹೋವ ದೇವರ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ. ಆದರೆ ಆಮೋನನು ಅಧಿಕವಾಗಿ ಅಪರಾಧ ಮಾಡಿದನು.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ಯೇಸು ಅವನಿಗೆ, “ನೀನು ನನ್ನನ್ನು ಕಂಡಿದ್ದರಿಂದ ನಂಬಿದ್ದೀಯಾ? ಕಾಣದೆ ನಂಬಿದವರು ಧನ್ಯರು,” ಎಂದರು.


ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು.


ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮಲ್ಲಿ ಭರವಸವಿಡುವವನೇ ಭಾಗ್ಯವಂತನು.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.


ಐಶ್ವರ್ಯವಂತನಾದ ಸಹೋದರನು, ತಾನು ದೀನಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಆದರೆ ಐಶ್ವರ್ಯವಂತನು ಕಾಡು ಹೂವಿನಂತೆ ಮರೆಯಾಗುವನು.


“ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.


ಇದಲ್ಲದೆ ಅವನ ಪ್ರಾರ್ಥನೆಯೂ, ಅವನು ದೇವರಿಗೆ ಭಿನ್ನವಿಸಿದ್ದೂ, ಅವನ ಸಮಸ್ತ ಪಾಪವೂ, ಅವನ ಅಪನಂಬಿಕೆಯೂ, ಅವನು ತಗ್ಗಿಸಿಕೊಳ್ಳುವುದಕ್ಕಿಂತ ಮುಂಚೆ ಕಟ್ಟಿಸಿದ ಉನ್ನತ ಸ್ಥಳಗಳನ್ನೂ, ನಿಲ್ಲಿಸಿದ ಅಶೇರ ಸ್ತಂಭಗಳೂ, ಕೆತ್ತಿಸಿದ ವಿಗ್ರಹಗಳೂ, ಸ್ಥಾಪಿಸಿದ ಸ್ಥಳಗಳೂ ಪ್ರವಾದಿಗಳ ದಾಖಲೆಗಳಲ್ಲಿ ಬರೆದಿರುತ್ತವೆ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.


ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.


ಅನೇಕರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು, ಪರಲೋಕ ರಾಜ್ಯದಲ್ಲಿ ಅಬ್ರಹಾಮ್, ಇಸಾಕ್, ಯಾಕೋಬರೊಂದಿಗೆ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.


“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.


ಆದರೆ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ,” ಎಂದರು.


ನನ್ನ ತಂದೆ ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ, ನಾನೂ ನಿಮಗೆ ರಾಜ್ಯವನ್ನು ನೇಮಕ ಮಾಡುತ್ತೇನೆ.


ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಏಕೆಂದರೆ ನೀನು ನಿನ್ನ ವಿಷಯದಲ್ಲಿ, ‘ನಾನು ಐಶ್ವರ್ಯವಂತನು, ನಾನು ಸಂಪಾದಕನಾಗಿದ್ದೇನೆ ಮತ್ತು ಕೊರತೆ ನನಗಿಲ್ಲ,’ ಎಂದು ಹೇಳಿಕೊಳ್ಳುತ್ತಿ. ಆದರೆ ನೀನು ಕೇವಲ ದುರವಸ್ಥೆಯುಳ್ಳವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾದವನು ಎಂಬುದನ್ನು ತಿಳಿಯದೆ ಇದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು