Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:35 - ಕನ್ನಡ ಸಮಕಾಲಿಕ ಅನುವಾದ

35 ಭೂಮಿಯ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಪಾದಪೀಠವು. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ಮಹಾರಾಜನ ಪಟ್ಟಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಭೂಮಿಯ ಮೇಲೆ ಆಣೆ ಇಡಬೇಡಿ ಅದು ಆತನ ಪಾದಪೀಠ. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿ; ಅದು ಆ ಮಹಾ ರಾಜನ ಪಟ್ಟಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಭೂಮಿಯ ಮೇಲೆ ಆಣೆಯಿಡಬೇಡಿ, ಅದು ದೇವರ ಪಾದಪೀಠ; ಜೆರುಸಲೇಮಿನ ಮೇಲೆ ಆಣೆಯಿಡಬೇಡಿ, ಅದು ರಾಜಾಧಿರಾಜನ ಪಟ್ಟಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಭೂವಿುಯ ಮೇಲೆ ಆಣೆ ಇಡಬೇಡ; ಅದು ಆತನ ಪಾದಪೀಠವು. ಯೆರೂಸಲೇವಿುನ ಮೇಲೆ ಆಣೆ ಇಡಬೇಡ; ಅದು ಆ ದೊಡ್ಡ ಅರಸನ ಪಟ್ಟಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಭೂಮಿಯ ಮೇಲೂ ಆಣೆ ಇಡಬೇಡಿ. ಏಕೆಂದರೆ ಭೂಮಿಯು ದೇವರ ಪಾದಪೀಠ. ಜೆರುಸಲೇಮಿನ ಮೇಲೂ ಆಣೆ ಇಡಬೇಡಿ, ಏಕೆಂದರೆ ಅದು ಆ ಮಹಾರಾಜನ ಪಟ್ಟಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಜಿಮ್ನಿಚ್ಯಾ ನಾವಾನ್‍ಬಿ ಆನ್ ಘಾಲುನಕಾಶಿ, ತೆಚೆ ಪಾಯ್ ಥವ್ತಲೊ ಮ್ಹನಿ ತಿ; ಜೆರುಜಲೆಮಾಚ್ಯಾ ನಾವಾನ್ ಆನ್ ಘಾಲುನಕಾಶಿ, ಮೊಟ್ಯಾ ರಾಜಾಚೆ ಶಾರ್ ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:35
10 ತಿಳಿವುಗಳ ಹೋಲಿಕೆ  

ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ.


ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಪರಿಶುದ್ಧ ಪಟ್ಟಣವಾದ ಯೆರೂಸಲೇಮು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದು ಬರುವುದನ್ನು ನನಗೆ ತೋರಿಸಿದನು.


“ಆದರೆ ತನ್ನ ಮಂದೆಯಲ್ಲಿ ದೋಷವಿಲ್ಲದ ಗಂಡು ಪಶು ಇರಲಾಗಿ ಅದನ್ನು ಅರ್ಪಿಸಲು ಪ್ರಮಾಣಮಾಡಿ, ಯೆಹೋವ ದೇವರಿಗೆ ದೋಷವುಳ್ಳದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ, ಏಕೆಂದರೆ ನಾನು ಮಹಾ ಅರಸನು, ನನ್ನ ಹೆಸರು ಇತರ ಜನಾಂಗಗಳಲ್ಲಿ ಭಯಭಕ್ತಿಯುಳ್ಳದ್ದಾಗಿರಬೇಕು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.


ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ಅವರ ಪಾದಪೀಠದಲ್ಲಿ ಆರಾಧಿಸಿರಿ. ಏಕೆಂದರೆ ಅವರು ಪರಿಶುದ್ಧರಾಗಿದ್ದಾರೆ.


ದೇವರು ಚೀಯೋನಿನ ದ್ವಾರಗಳನ್ನು ಯಾಕೋಬನ ಎಲ್ಲಾ ನಿವಾಸಗಳಿಗಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಾರೆ.


ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ನಿನ್ನ ತಲೆಯ ಮೇಲೂ ಆಣೆಯಿಡುವುದು ಬೇಡ, ಏಕೆಂದರೆ ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.


“ ‘ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ. ನೀವು ನನಗಾಗಿ ಎಂಥಾ ಆಲಯವನ್ನು ಕಟ್ಟುವಿರಿ? ಎಲ್ಲಿ ನನ್ನ ವಿಶ್ರಾಂತಿಯ ಸ್ಥಳ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು