Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:10 - ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ‘ಸ್ವರ್ಗ ದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿನ್ನ ರಾಜ್ಯ ಬರಲಿ. ನಿನ್ನ ಚಿತ್ತ ಪರಲೋಕದಲ್ಲಿ ನೆರವೇರುವಂತೆ ಭೂಲೋಕದಲ್ಲಿಯೂ ನೆರವೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತುಜೊ ರಾಜ್ ಯೆಂವ್ದಿತ್; ಕಶೆ ಸರ್‍ಗಾ ವರ್‍ತಿ ಸಗ್ಳೆ ತುಜ್ಯಾ ಮನಾ ಸರ್ಕೆ ಹೊತಾ, ತಸೆಚ್ ಹ್ಯಾ ಜಗಾತ್‍ಬಿ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:10
44 ತಿಳಿವುಗಳ ಹೋಲಿಕೆ  

ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ಅವರು ಮಾಡಿದ ವಾಗ್ದಾನವನ್ನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ:


ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.


ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.


ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.


ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.


ಆದಕಾರಣ ನಾವೂ ಸಹ ನಿಮ್ಮ ಬಗ್ಗೆ ಕೇಳಿದ ದಿನದಿಂದ ನಿಮಗಾಗಿ ಪ್ರಾರ್ಥಿಸುವುದನ್ನು ಬಿಡಲಿಲ್ಲ. ನೀವು ದೇವರಾತ್ಮ ನೀಡುವ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ, ದೇವರ ಚಿತ್ತದ ತಿಳುವಳಿಕೆಯಿಂದ ತುಂಬಿರಬೇಕೆಂದು ನಾವು ದೇವರಿಗೆ ಬೇಡಿಕೊಳ್ಳುತ್ತಿದ್ದೇವೆ.


ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ.


ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ; ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.”


“ನನ್ನನ್ನು, ‘ಸ್ವಾಮೀ, ಸ್ವಾಮೀ,’ ಎಂದು ಹೇಳುವವರೆಲ್ಲರೂ ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ. ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ಅದರಲ್ಲಿ ಪ್ರವೇಶಿಸುವನು.


ನೀವು ನಿಮ್ಮ ಒಳ್ಳೆಯ ನಡತೆಯಿಂದ, ತಿಳುವಳಿಕೆಯಿಲ್ಲದೆ ಮಾತಾಡುವ ಮೂಢಜನರ ಬಾಯಿ ಮುಚ್ಚುವಂತೆ ಮಾಡುವುದೇ ದೇವರ ಚಿತ್ತ.


ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.


“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.


ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’


“ತಂದೆಯೇ, ನಿಮ್ಮ ಚಿತ್ತವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸಿ. ಆದರೂ ನನ್ನ ಚಿತ್ತವಲ್ಲ ನಿಮ್ಮ ಚಿತ್ತದಂತೆಯೇ ಆಗಲಿ,” ಎಂದು ಪ್ರಾರ್ಥಿಸಿದರು.


ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ತರುವಾಯ ಜನರ ದೊಡ್ಡ ಗುಂಪಿನ ಶಬ್ದವನ್ನು ಕೇಳಿದೆನು. ಅದು ಹೀಗೆ ಹೇಳಿತು: “ಹಲ್ಲೆಲೂಯಾ! ಸರ್ವಶಕ್ತ ಆಗಿರುವ ನಮ್ಮ ಕರ್ತದೇವರು ಆಳುತ್ತಾರೆ.


ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು.


ಪೌಲನು ಸಮ್ಮತಿಸದೆ ಇದ್ದ ಕಾರಣ, “ಕರ್ತ ಯೇಸುವಿನ ಚಿತ್ತ ನೆರವೇರಲಿ,” ಎಂದು ಹೇಳಿ ನಾವು ಸುಮ್ಮನಾದೆವು.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.


ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.


ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.


ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.


ಆಗ ನಾನು ಹೀಗೆಂದೆನು, ‘ಓ, ದೇವರೇ, ಪವಿತ್ರ ವೇದದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವಂತೆ ನಾನು ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ.’ ”


“ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!” “ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!”


ದೇವರ ಚಿತ್ತದಂತೆ ಮಾಡುವವರೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ ಆಗಿದ್ದಾರೆ,” ಎಂದು ಹೇಳಿದರು.


“ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು.


“ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ನೀವು ಒಬ್ಬರೇ ದೇವರಾಗಿದ್ದೀರಿ. ನೀವು ಆಕಾಶವನ್ನೂ ಅದರ ಸಮಸ್ತ ಸೈನ್ಯವನ್ನೂ, ಭೂಮಿಯನ್ನೂ, ಅದರಲ್ಲಿರುವ ಪ್ರತಿಯೊಂದನ್ನೂ, ಸಮುದ್ರಗಳನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿದ್ದೀರಿ. ಅವುಗಳಿಗೆಲ್ಲಾ ಜೀವ ಕೊಡುವವರು ನೀವೇ. ಇದಲ್ಲದೆ ಆಕಾಶಗಳ ಸೈನ್ಯವು ನಿಮ್ಮನ್ನು ಆರಾಧಿಸುತ್ತವೆ.


“ಬರಲಿರುವ ನಮ್ಮ ತಂದೆಯಾದ ದಾವೀದನ ರಾಜ್ಯವು ಆಶೀರ್ವಾದ ಹೊಂದಲಿ!” “ಉನ್ನತದಲ್ಲಿ ಹೊಸನ್ನ!” ಎಂದು ಹೇಳಿದರು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.


ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ, ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದುದರಿಂದಲೂ ದೇವರ ರಾಜ್ಯವು ಕೂಡಲೇ ಪ್ರತ್ಯಕ್ಷವಾಗುವುದೆಂದು ಅವರು ಭಾವಿಸಿದ್ದರಿಂದ


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.


“ಆಗ ಅವನು, ‘ನಮ್ಮ ಪಿತೃಗಳ ದೇವರು ತಮ್ಮ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕಾಗಿಯೂ ನೀತಿವಂತ ಆಗಿರುವ ಒಬ್ಬರನ್ನು ಕಾಣುವುದಕ್ಕಾಗಿಯೂ ಅವರ ಬಾಯಿಂದ ಒಂದು ಮಾತನ್ನು ಕೇಳುವುದಕ್ಕಾಗಿಯೂ ನಿನ್ನನ್ನು ಮುಂದಾಗಿಯೇ ನೇಮಿಸಿದ್ದಾರೆ.


“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು