Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:12 - ಕನ್ನಡ ಸಮಕಾಲಿಕ ಅನುವಾದ

12 ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ, ನಮ್ಮ ಸಾಲಗಳನ್ನು ಕ್ಷಮಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಮಗೆ ತಪ್ಪು ಮಾಡಿದವರನ್ನು ನಾವು ಕ್ಷವಿುಸಿದಂತೆ ನಮ್ಮ ತಪ್ಪುಗಳನ್ನು ಕ್ಷವಿುಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕಶೆ ದುಸ್ರ್ಯಾನಿ ಕರಲ್ಲ್ಯಾ ಚುಕಾ ಅಮಿ ಮಾಪ್ ಕರ್‍ತಾವ್, ತಸೆ ಅಮಿ ಕರಲ್ಲ್ಯಾ ಚುಕಾಬಿ ಮಾಪ್ ಕರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:12
25 ತಿಳಿವುಗಳ ಹೋಲಿಕೆ  

ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.


ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು.


ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.


ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ನಮಗೆ ಪಾಪಮಾಡಿದವರನ್ನು, ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಯೊಳಗೆ ಸೇರಿಸದೆ, ಕೇಡಿನಿಂದ ನಮ್ಮನ್ನು ತಪ್ಪಿಸಿ.”


“ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು.


ಸಾವಿರ ತಲೆಗಳವರೆಗೂ ಕರುಣೆ ತೋರಿಸುವಾತನು. ದೋಷವನ್ನು, ಅಪರಾಧವನ್ನು, ಪಾಪವನ್ನು ಕ್ಷಮಿಸುವಾತನು ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನು,” ಎಂದು ಪ್ರಕಟಿಸಿಕೊಂಡರು.


ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.


ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು. ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.


ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ಕರ್ತದೇವರೇ ಕೇಳಿರಿ! ಕರ್ತದೇವರೇ ಕ್ಷಮಿಸಿರಿ! ಕರ್ತದೇವರೇ ಲಾಲಿಸಿರಿ ಮತ್ತು ಕಾರ್ಯವನ್ನು ಸಾಧಿಸಿರಿ! ನನ್ನ ದೇವರೇ, ನಿಮ್ಮ ನಿಮಿತ್ತವಾಗಿ ತಡಮಾಡಬೇಡಿರಿ. ಏಕೆಂದರೆ ನಿಮ್ಮ ಪಟ್ಟಣವೂ ನಿಮ್ಮ ಜನರೂ ನಿಮ್ಮ ಹೆಸರನ್ನು ಧರಿಸಿದ್ದಾರೆ.”


ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ.


ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನೂ, ಅವರ ಸಮಸ್ತ ದ್ರೋಹಗಳನ್ನೂ ಕ್ಷಮಿಸಿರಿ; ಅವರನ್ನು ಸೆರೆಯಾಗಿ ಒಯ್ಯುವವರು ಅವರನ್ನು ಕರುಣಿಸುವಂತೆ ನೀವು ಸಹ ಅವರನ್ನು ಕರುಣಿಸಿರಿ.


“ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ.


ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.


ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.


ಇಲ್ಲವೆ ಸಿಲೋವ ಎಂಬಲ್ಲಿ ಗೋಪುರವು ಬಿದ್ದು ಸತ್ತು ಹೋದ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ದೋಷಿಗಳೆಂದು ಭಾವಿಸುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು