Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:24 - ಕನ್ನಡ ಸಮಕಾಲಿಕ ಅನುವಾದ

24 “ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 “ಕೊನ್ಬಿ ಎಕ್ಲ್ಯಾನ್ ದೊನ್ ಧನಿಯಾಂಚಿ ಸೆವಾ ಕರುಕ್ ಹೊಯ್ನಾ; ತೊ ಎಕ್ಲ್ಯಾಚೊ ಪ್ರೆಮ್ ಕರ್‍ತಾ ಅನಿ ಅನಿಎಕ್ಲ್ಯಾಚೊ ರಾಗ್ ಕರ್‍ತಾ; ಎಕ್ಲ್ಯಾಚಿ ತೊ ಬರಿ ಕರುನ್ ಸೆವಾ ಕರ್‍ತಾ, ಅನಿ ಅನಿಎಕ್ಲ್ಯಾಚಿ ಬರಬ್ಬರ್ ಸೆವಾ ಕರಿನಾ. ತುಮಿ ದೆವಾಚಿ ಅನಿ ಪೈಸ್ಯಾಂಚಿ ದೊಗ್ಯಾಂಚಿಬಿ ಸೆವಾ ಕರುಕ್ ಹೊಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:24
20 ತಿಳಿವುಗಳ ಹೋಲಿಕೆ  

“ಯಾವ ಸೇವಕನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು. ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ,” ಎಂದರು.


ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಆದ್ದರಿಂದ ಲೌಕಿಕ ಸಂಪತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ, ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?


ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.


ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.


ಇವರು ಯೆಹೋವ ದೇವರಿಗೆ ಇಂದಿನವರೆಗೂ ಭಯಪಡದೆ, ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು. ಇವರ ಪಿತೃಗಳು ಮಾಡಿದ ಹಾಗೆ, ಇವರೂ, ಇವರ ಮಕ್ಕಳೂ, ಇವರ ಮೊಮ್ಮಕ್ಕಳೂ ಮಾಡುತ್ತಿದ್ದಾರೆ.


ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು.


“ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.


ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು.


ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ


ಅವರು ತಮ್ಮ ಪಶುಗಳನ್ನೆಲ್ಲಾ ಯೋಸೇಫನ ಬಳಿಗೆ ತಂದರು. ಅವುಗಳ ಬದಲಾಗಿ ಅವನು ಆಹಾರ ಧಾನ್ಯ ಕೊಟ್ಟನು. ಅವರ ಕುದುರೆಗಳನ್ನೂ ಕುರಿಗಳನ್ನೂ ಆಡುಗಳನ್ನೂ ದನಗಳನ್ನೂ ಕತ್ತೆಗಳನ್ನೂ ಬದಲಾಗಿ ತೆಗೆದುಕೊಂಡನು. ಆ ವರ್ಷ ಅವರು ಆಹಾರಕ್ಕಾಗಿ ತಮ್ಮ ಎಲ್ಲಾ ಪಶುಪ್ರಾಣಿಗಳನ್ನು ಮಾರಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು