Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:25 - ಕನ್ನಡ ಸಮಕಾಲಿಕ ಅನುವಾದ

25 “ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಈ ಕಾರಣದಿಂದ - ನಮ್ಮ ಪ್ರಾಣಧಾರಣೆಗೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 “ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ತುಮಿ ಬಾಳ್ವಿ ಕರುಕ್ ಪೊಟಾಕ್ ಖಾತಲ್ಯಾ ಅನಿ ಫಿತಲ್ಯಾ ವಿಶಯಾತ್, ನಾಜಾಲ್ಯಾರ್ ಆಂಗಾರ್ ನೆಸ್ತಲ್ಯಾ ಕಪ್ಡ್ಯಾಂಚ್ಯಾ ವಿಶಯಾತ್ ಯವ್ಜುನಕಾಶಿ, ಖಾತಲ್ಯಾಚ್ಯಾನ್ಕಿ ಜಿವ್ ಕವ್ಡ್ಯಾಕಿ ಕಿಮ್ತಿಚೊ ಹೊಯ್ ಕಾಯ್ ನ್ಹಯ್? ಅನಿ ಕಪ್ಡ್ಯಾಂಚ್ಯಾನ್ಕಿ ಆಂಗ್ ಕವ್ಡ್ಯಾಕಿ ಕಿಮ್ತಿಚೆ ಹೊಯ್ ಕಾಯ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:25
22 ತಿಳಿವುಗಳ ಹೋಲಿಕೆ  

ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.


ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?


ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ. ಅವರು ನಿಮಗೆ ಆಧಾರವಾಗಿರುವರು. ದೇವರು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸುವುದಿಲ್ಲ.


ಆದ್ದರಿಂದ, ‘ಏನು ಊಟಮಾಡಬೇಕು? ಏನು ಕುಡಿಯಬೇಕು ಮತ್ತು ಏನು ಧರಿಸಬೇಕು?’ ಎಂದು ಚಿಂತಿಸಬೇಡಿರಿ.


ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.


ಆದರೆ ಅವರು ನಿಮ್ಮನ್ನು ಬಂಧಿಸುವಾಗ, ನೀವು ಹೇಗೆ ಇಲ್ಲವೆ ಏನು ಮಾತನಾಡಬೇಕೆಂದು ಯೋಚಿಸಬೇಡಿರಿ. ನೀವು ಏನು ಮಾತನಾಡಬೇಕೆಂಬುದು ಆ ಗಳಿಗೆಯಲ್ಲೇ ನಿಮಗೆ ತಿಳಿಸಲಾಗುವುದು,


ನೀವು ಚಿಂತೆ ಇಲ್ಲದೆ ಇರಬೇಕೆಂಬುದು ನನ್ನ ಇಷ್ಟ. ಮದುವೆ ಆಗದವನು ಕರ್ತ ಯೇಸುವನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತ ಯೇಸುವಿನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.


ಆದ್ದರಿಂದ, ನಾಳೆಯ ವಿಷಯವಾಗಿ ಚಿಂತಿಸಬೇಡಿರಿ. ನಾಳೆಯ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು, ಆ ದಿನದ ಪಾಡು ಆ ದಿನಕ್ಕೆ ಸಾಕು.


ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು.


ಬೀಜ ಬಿದ್ದ ಮುಳ್ಳುನೆಲವು ಯಾರೆಂದರೆ ವಾಕ್ಯವನ್ನು ಕೇಳಿದ ಮೇಲೆ ಮುಂದುವರಿದು, ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಮತ್ತು ಭೋಗಗಳಿಂದಲೂ ಅದುಮಿಬಿಟ್ಟು, ಪರಿಪಕ್ವತೆಗೆ ಫಲಕೊಡದಿದ್ದವರು.


ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,


ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ.


ಹಾಗಾದರೆ ನೀನು ನಿನಗೋಸ್ಕರ ದೊಡ್ಡವುಗಳನ್ನು ಹುಡುಕುತ್ತೀಯೋ? ಹುಡುಕಬೇಡ. ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ. ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನೀನು ಉಳಿಸಿಕೊಳ್ಳುವಂತೆ ಮಾಡುವೆನು, ಎಂದು ನಿನಗೆ ಹೇಳಿದ್ದಾರೆ,’ ಎಂದನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು