ಮತ್ತಾಯ 6:26 - ಕನ್ನಡ ಸಮಕಾಲಿಕ ಅನುವಾದ26 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ಗಮನಿಸಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಬಗಾ ತ್ಯಾ ಫಾಂಕ್ರಾಕ್ನಿ: ತೆನಿ ಭ್ಹಿಂಯ್ ಪೆರಿನ್ಯಾತ್, ನಾ ಪಿಕ್ಕ್ ಕಾತ್ರಿನಾತ್ ಪಿಕ್ಕ್ ಗೊಳಾ ಕರುನ್ ತಟ್ಟ್ಯಾತ್ನಿ ಥವ್ನ್ ಘೆಯ್‍ನ್ಯಾತ್; ಜಾಲ್ಯಾರ್‍ಬಿ ತುಮ್ಚೊ ಸರ್‍ಗಾ ವೈಲೊ ಬಾಬಾ ತೆಂಕಾ ಬಾಳಗ್ತಾ! ಫಾಕ್ರಾಂಚ್ಯಾನ್ಕಿ ಕವ್ಡೆಕಿ ಕಿಮ್ತಿಚೆ ತುಮಿ, ಹೊಯ್ ಕಾಯ್ ನ್ಹಯ್? ಅಧ್ಯಾಯವನ್ನು ನೋಡಿ |