Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:27 - ಕನ್ನಡ ಸಮಕಾಲಿಕ ಅನುವಾದ

27 ನೀವು ಚಿಂತಿಸುವುದರಿಂದ ನಿಮ್ಮ ಜೀವನಕ್ಕೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳ ಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಚಿಂತಿಸಿ, ಚಿಂತಿಸಿ ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಚಿಂತೆಮಾಡಿಮಾಡಿ ಒಂದು ಮೊಳ ಉದ್ದ ಬೆಳೆಯುವದು ನಿಮ್ಮಲ್ಲಿ ಯಾರಿಂದಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀವು ಚಿಂತಿಸುವುದರಿಂದ ನಿಮ್ಮ ಆಯುಷ್ಯು ಹೆಚ್ಚೇನೂ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಕೊನ್ ತರ್ ಎಕ್ಲ್ಯಾನ್ ಯವ್ಜುನ್ ಅಪ್ನಾಚ್ಯಾ ಜಿವನಾಚಿ ಅವ್ದಿ ಎಕ್ ಉಲ್ಲಿ ತರ್‍ಬಿ ಜಾಸ್ತಿ ಕರುನ್ ಘೆವ್ಕ್ ಹೊತಾ ಕಾಯ್?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:27
14 ತಿಳಿವುಗಳ ಹೋಲಿಕೆ  

ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.


ನಿನ್ನ ತಲೆಯ ಮೇಲೂ ಆಣೆಯಿಡುವುದು ಬೇಡ, ಏಕೆಂದರೆ ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.


ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತಮ್ಮ ಇಷ್ಟದ ಪ್ರಕಾರ ದೇಹದಲ್ಲಿ ಇಟ್ಟಿದ್ದಾರೆ.


“ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ?


“ನೀವು ಉಡುಪಿನ ವಿಷಯ ಚಿಂತಿಸುವುದೇಕೆ? ಅಡವಿಯಲ್ಲಿ ಹೂವುಗಳು ಬೆಳೆಯುವುದನ್ನು ಗಮನಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ.


ಆದ್ದರಿಂದ, ‘ಏನು ಊಟಮಾಡಬೇಕು? ಏನು ಕುಡಿಯಬೇಕು ಮತ್ತು ಏನು ಧರಿಸಬೇಕು?’ ಎಂದು ಚಿಂತಿಸಬೇಡಿರಿ.


ಆದ್ದರಿಂದ, ನಾಳೆಯ ವಿಷಯವಾಗಿ ಚಿಂತಿಸಬೇಡಿರಿ. ನಾಳೆಯ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು, ಆ ದಿನದ ಪಾಡು ಆ ದಿನಕ್ಕೆ ಸಾಕು.


ಅದಕ್ಕೆ ಕರ್ತದೇವರು ಪ್ರತ್ಯುತ್ತರವಾಗಿ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ,


“ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,


ಯೇಸು ತಮ್ಮ ಶಿಷ್ಯರಿಗೆ: “ಆದಕಾರಣ, ನೀವು ನಿಮ್ಮ ಜೀವನಕ್ಕಾಗಿ ಏನು ಊಟಮಾಡಬೇಕು; ಮತ್ತು ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.


ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು