Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:4 - ಕನ್ನಡ ಸಮಕಾಲಿಕ ಅನುವಾದ

4 ಹೀಗೆ ನಿನ್ನ ದಾನಧರ್ಮವು ಗುಟ್ಟಾಗಿರುವಾಗ, ಅಂತರಂಗದಲ್ಲಿ ಮಾಡುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ದಾನವನ್ನು ರಹಸ್ಯವಾಗಿ ಕೊಡಬೇಕು. ರಹಸ್ಯದಲ್ಲಿ ನಡೆಯುವ ಕಾರ್ಯಗಳನ್ನು ನೋಡಬಲ್ಲ ನಿಮ್ಮ ತಂದೆ ನಿಮಗೆ ಪ್ರತಿಫಲ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ತೆ ಕೊನಾಕ್ಬಿ ಗೊತ್ತ್ ನಸ್ತಾನಾ ಕರ್ಲ್ಯಾ ಸರ್ಕೆ ಹೊತಾ, ಅನಿ ತುಮಿ ಕೊನಾಕ್ಬಿ ಕಳ್ವಿನಸ್ತಾನಾ ಕರಲ್ಲೆ ಬಗುನ್ ತುಮ್ಚೊ ಸರ್‍ಗಾ ವೈಲೊ ಬಾಬಾ ತುಮ್ಕಾ ತ್ಯಾ ಕಾಮಾಚೊ ಪ್ರತಿಫಳ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:4
19 ತಿಳಿವುಗಳ ಹೋಲಿಕೆ  

ಹೀಗೆ ಮಾಡಿದರೆ, ಕಾಣದಿರುವ ನಿನ್ನ ತಂದೆಯ ಹೊರತು ಬೇರೆ ಯಾರಿಗೂ ನೀನು ಉಪವಾಸದಿಂದಿರುವುದು ತಿಳಿಯುವುದಿಲ್ಲ ಮತ್ತು ಗುಟ್ಟಾಗಿ ಮಾಡುವುದನ್ನು ಕಾಣುವ ನಿನ್ನ ತಂದೆ, ನಿನಗೆ ಪ್ರತಿಫಲ ಕೊಡುವರು.


ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು.


“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”


ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”


ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.


ಪ್ರಕಟವಾಗದಂತೆ ಯಾವುದೂ ಮರೆಯಾಗಿರುವುದಿಲ್ಲ, ಬೆಳಕಿಗೆ ಬಾರದೆ ಇರುವ ರಹಸ್ಯವು ಯಾವುದೂ ಇಲ್ಲ.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ಯಾವನಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಕೇವಲ ಒಂದು ಲೋಟ ತಣ್ಣೀರನ್ನು ಕುಡಿಯುವುದಕ್ಕೆ ಕೊಡುವವನು ತನ್ನ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ಸತ್ಯವಾಗಿ ನಾನು ನಿಮಗೆ ಹೇಳುತ್ತೇನೆ.”


ಕತ್ತಲು ನಿಮಗೆ ಕತ್ತಲಾಗಿರುವುದಿಲ್ಲ; ರಾತ್ರಿಯು ಹಗಲಿನ ಹಾಗೆ ಪ್ರಕಾಶಿಸುವುದು, ಏಕೆಂದರೆ ಕತ್ತಲು ನಿಮಗೆ ಬೆಳಕಿನಂತಿರುವುದು.


ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ನೀವು ನನ್ನ ಹೃದಯವನ್ನು ಶೋಧಿಸಿದರೂ, ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ, ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ; ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ.


ಏಕೆಂದರೆ ಅದು ಅವನ ತಲೆಯ ಮೇಲೆ ಉರಿಯುವ ಬೆಂಕಿಯ ಕೆಂಡಗಳನ್ನು ಸುರಿಯುವಂತಿರುವುದು; ಯೆಹೋವ ದೇವರು ನಿನಗೆ ಪ್ರತಿಫಲ ಕೊಡುವರು.


ಆದರೆ ನೀನು ದಾನಧರ್ಮ ಮಾಡುವಾಗ, ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೆ ತಿಳಿಯದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು