Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:9 - ಕನ್ನಡ ಸಮಕಾಲಿಕ ಅನುವಾದ

9 “ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: “ ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಸಲಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ಹೆಸರು ಪರಿಶುದ್ಧವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮಿ ಮಾಗ್ನಿ ಕರ್‍ತಾನಾ ಅಸೆ ಮಾಗ್ನಿ ಕರುಚೆ: “ಸರ್‍ಗಾ ವೈಲ್ಯಾ ಅಮ್ಚ್ಯಾ ಬಾಬಾ; ತುಜ್ಯಾ ಪವಿತ್ರ್ ನಾವಾಕ್ ಲೈ ಮರ್‍ಯಾದ್ ಗಾವುಂದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:9
43 ತಿಳಿವುಗಳ ಹೋಲಿಕೆ  

“ನಮ್ಮ ಕರ್ತ ಆಗಿರುವ ದೇವರೇ, ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ. ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು, ನಿಮ್ಮ ಚಿತ್ತದಿಂದಲೇ ಇದ್ದವು,” ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು.


ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ.


ನೀನು ನನ್ನ ಮಹತ್ವದ ನಾಮವನ್ನು ಅಪವಿತ್ರತೆಗೆ ಗುರಿಮಾಡಿದ ಇತರ ಜನಾಂಗಗಳಲ್ಲಿ ನನ್ನ ಪವಿತ್ರ ನಾಮವನ್ನು ತೋರಿಸುವೆನು. ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮೂಲಕವಾಗಿ ನನ್ನನ್ನು ಪವಿತ್ರನೆಂದು ತೋರಿಸುವಾಗ ಅವರು ನಾನು ಯೆಹೋವ ದೇವರೆಂಬುದನ್ನು ತಿಳಿದುಕೊಳ್ಳುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ದೇವರು ತಮ್ಮ ಜನರಿಗೆ ವಿಮೋಚನೆಯನ್ನು ಕಳುಹಿಸಿದರು; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸಿದ್ದಾರೆ; ದೇವರ ಹೆಸರು ಪರಿಶುದ್ಧರು, ಅತಿಶಯರು ಎಂಬುದು.


ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ, ನಾವು ಮಣ್ಣು. ನೀನು ನಮ್ಮ ಕುಂಬಾರನು. ನಾವೆಲ್ಲರೂ ನಿನ್ನ ಕೈಕೆಲಸಗಳು.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.


ಅವರು, ಮಹಾಧ್ವನಿಯಿಂದ: “ವಧಿತರಾದ ಕುರಿಮರಿ ಆಗಿರುವವರು ಶಕ್ತಿ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಗೌರವ, ಮಹಿಮೆ, ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯರು!” ಎಂದು ಹೇಳಿದರು.


ನಮ್ಮ ದೇವರು ಪರಲೋಕದಲ್ಲಿದ್ದಾರೆ; ಅವರು ಇಚ್ಛಿಸುವುದನ್ನೆಲ್ಲಾ ಮಾಡುತ್ತಾರೆ.


ಲೇವಿಯರಾದ ಯೇಷೂವ, ಕದ್ಮಿಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು ಜನರಿಗೆ: “ಏಳಿರಿ, ಎಂದೆಂದಿಗೂ ಏಕರೀತಿಯಾಗಿರುವ ನಿಮ್ಮ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿರಿ,” ಎಂದರು. ಅನಂತರ ಅವರು, “ಯೆಹೋವ ದೇವರೇ, ಸಕಲ ಸ್ತುತಿ ಆಶೀರ್ವಾದಗಳಿಗೆ ಉನ್ನತವಾದದ್ದು ನಿಮ್ಮ ಮಹಿಮೆಯುಳ್ಳ ಹೆಸರು.


ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!


ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ, ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ಯೆಹೋವ ದೇವರಾದ ನೀವೇ ನಮ್ಮ ತಂದೆಯೂ, ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ


ಅದ್ಭುತಗಳನ್ನು ಮಾಡುವುದರಲ್ಲಿ ಸರಿಸಾಟಿಯಿಲ್ಲದ ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ.


ನಾನು ನಿಮಗೆ ಹೇಳುವುದೇನೆಂದರೆ, ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ,” ಎಂದರು.


ಭೂಮಿಯಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿರಿ, ಪರಲೋಕದಲ್ಲಿ ಇರುವವರೇ ನಿಮ್ಮ ತಂದೆ.


ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.


“ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?


ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ, ಆತನಿಗೆ: ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿಮಗೆ ವಿರೋಧವಾಗಿಯೂ ನಾನು ಪಾಪಮಾಡಿದ್ದೇನೆ.


ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.


ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.


ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’


‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲ್ ದೇವರಾಗಿದ್ದಾರೆಂದು ನಿಮ್ಮ ನಾಮವು ಶಾಶ್ವತವಾಗಿ ಘನಪಡಲಿ,’ ಎಂದು ಜನರು ಹೇಳಲಿ. ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರಲಿ.


ಹೀಗೆ ನಿಮ್ಮ ಹೆಸರು ಎಂದೆಂದಿಗೂ ಶ್ರೇಷ್ಠವಾಗಿರುತ್ತದೆ. ಆಗ ಜನರು, ‘ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲರ ದೇವರು,’ ಎಂದು ಹೇಳುವರು. ಇದಲ್ಲದೆ ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರುವುದು.


ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.


“ಆದರೂ ಮಗನು ತಂದೆಗೆ, ‘ಅಪ್ಪಾ, ನಾನು ಪರಲೋಕಕ್ಕೆ ವಿರೋಧವಾಗಿಯೂ ನಿಮ್ಮ ಮುಂದೆಯೂ ಪಾಪಮಾಡಿದ್ದೇನೆ. ಇನ್ನೆಂದಿಗೂ ನಾನು ನಿಮ್ಮ ಮಗನೆಂದು ಕರೆಯಿಸಿಕೊಳ್ಳಲು ಯೋಗ್ಯನಲ್ಲ,’ ಎಂದನು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ನಿಮಗೆ ವಿರೋಧವಾಗಿ ತಪ್ಪುಮಾಡುವವರನ್ನು ನೀವು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮನ್ನು ಕ್ಷಮಿಸುವರು.


ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು.


ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ


ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.


ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು.


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.


ಒಂದು ರೂಪಾಯಿಗೆ ಎರಡು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು