Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:11 - ಕನ್ನಡ ಸಮಕಾಲಿಕ ಅನುವಾದ

11 ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅದಕ್ಕಿಂತಲೂ ಎಷ್ಟೋ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಒಳ್ಳೆಯ ಕೊಡುಗೆಗಳನ್ನು ಕೊಡಬಲ್ಲರು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತುಮಿ ಬುರ್ಶೆ ಹೊಲ್ಯಾರ್ಬಿ ತುಮ್ಚ್ಯಾ ಪೊರಾಕ್ನಿ ಬರೆ ಖಲೆ ಹಾಯ್ ತೆಚ್ ದಿತ್ಯಾಶಿ, ತರ್ ಸರ್‍ಗಾ ವೈಲೊ ತುಮ್ಚೊ ಬಾಬಾ ಅಪ್ನಾಕ್ಡೆ ಮಾಗಲ್ಲ್ಯಾಕ್ನಿ ಕವ್ಡೆ ಬರೆ ಬರೆ ದಿತಾ ಅಸಿಲ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:11
35 ತಿಳಿವುಗಳ ಹೋಲಿಕೆ  

ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.


“ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಸ್ತ್ರೀ ತನ್ನ ಎದೆಹಾಲನ್ನು ಕುಡಿಯುವ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆಯುವುದಿಲ್ಲ.


ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.


ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.


ಮನುಷ್ಯನ ದುಷ್ಟತನವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


ಯೆಹೋವ ದೇವರು ಒಳ್ಳೆಯದನ್ನು ಕೊಡುವರು. ನಮ್ಮ ಭೂಮಿಯು ತನ್ನ ಸುಗ್ಗಿಯನ್ನು ಕೊಡುವುದು.


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.


ಹಾಗಾದರೆ ಏನು? ಯೆಹೂದ್ಯರಾದ ನಾವು ಯೆಹೂದ್ಯರಲ್ಲದವರಿಗಿಂತಲೂ ಶ್ರೇಷ್ಠರೋ? ಎಂದಿಗೂ ಇಲ್ಲವಲ್ಲ. ಯೆಹೂದ್ಯರಾಗಲಿ, ಯೆಹೂದ್ಯರಲ್ಲದವರಾಗಲಿ ಎಲ್ಲರೂ ಪಾಪದ ಶಕ್ತಿಗೆ ಒಳಗಾದವರೆಂದು ನಾವು ಈಗಾಗಲೇ ತೋರಿಸಿದ್ದೇವೆ.


“ ‘ಇಗೋ, ದಿನಗಳು ಬರಲಿವೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ಇಸ್ರಾಯೇಲಿನ ಮತ್ತು ಯೆಹೂದದ ಮನೆಯವರ ಸಂಗಡ ಹೇಳಿದ ಒಳ್ಳೆಯ ವಾಗ್ದಾನವನ್ನು ನೆರವೇರಿಸುವೆನು.


ಸಾರ್ವಭೌಮ ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಸಾರ್ವಭೌಮ ಯೆಹೋವ ದೇವರೇ, ಇದು ನೀವು ಮನುಷ್ಯನೊಂದಿಗೆ ವರ್ತಿಸುವ ಕ್ರಮ.


ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.


ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?


ಹಾಗಿರುವಾಗ, ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು, ದೇವರ ದೃಷ್ಟಿಯಲ್ಲಿ ಎಷ್ಟು ಅಲ್ಪನೂ ಅಶುದ್ಧನೂ ಆಗಿದ್ದಾನಲ್ಲವೇ?


ಯೆಹೋವ ದೇವರು ನಮಗೆ ಮಾಡಿದ್ದೆಲ್ಲದರ ಪ್ರಕಾರ, ಯೆಹೋವ ದೇವರ ಪ್ರೀತಿ ಕೃಪೆಗಳನ್ನೂ, ಯೆಹೋವ ದೇವರ ಕಾರ್ಯಗಳನ್ನು ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು. ಆತನು ತನ್ನ ಅಂತಃಕರುಣೆಯ ಪ್ರಕಾರವೂ, ತನ್ನ ಕೃಪೆಯ ಮಹಾ ಒಳ್ಳೆಯತನದ ಪ್ರಕಾರವೂ, ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.


ಇಲ್ಲವೆ ಮೀನನ್ನು ಕೇಳಿದರೆ ಅವನಿಗೆ ಹಾವನ್ನು ಕೊಡುವನೇ?


ಭೂಮಿಯಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿರಿ, ಪರಲೋಕದಲ್ಲಿ ಇರುವವರೇ ನಿಮ್ಮ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು