Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:12 - ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ, ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಬಯಸುತ್ತೀರೋ, ಅದರಂತೆಯೇ ನೀವು ಅವರಿಗೆ ಮಾಡಿರಿ; ಇದೇ ನಿಯಮ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಇದೇ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ದುಸ್ರ್ಯಾನಿ ತುಮ್ಕಾ ಕಶೆ ಕರುಚೆ ಮನುನ್ ತುಮಿ ಯವಜ್ತ್ಯಾಶಿ, ತಸೆಚ್ ತುಮಿಬಿ ದುಸ್ರ್ಯಾಕ್ನಿ ಕರಾ; ಮೊಯ್ಜೆನ್ ದಿಲ್ಲ್ಯಾ ಖಾಯ್ದ್ಯಾಂಚೊ ಅನಿ ಪ್ರವಾದ್ಯಾನಿ ಶಿಕ್ವಲ್ಲ್ಯಾಚೊ ಅರ್ತ್‍ ಹ್ಯೊಚ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:12
19 ತಿಳಿವುಗಳ ಹೋಲಿಕೆ  

ಇತರರು ನಿಮಗೆ ಏನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿರಿ.


“ ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.


ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?


ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು, ನ್ಯಾಯವನ್ನೂ, ನೀತಿಯನ್ನೂ ನಡೆಸಿದರೆ, ಅವನು ಸಾಯದೆ ಖಂಡಿತವಾಗಿ ಬದುಕುವನು.


“ಮೋಶೆಯ ನಿಯಮವನ್ನಾಗಲಿ, ಪ್ರವಾದನೆಗಳನ್ನಾಗಲಿ ರದ್ದು ಮಾಡುವುದಕ್ಕೆ ನಾನು ಬಂದೆನೆಂದು ಭಾವಿಸಬೇಡಿರಿ; ನಾನು ಅವುಗಳನ್ನು ರದ್ದುಗೊಳಿಸಲು ಬರಲಿಲ್ಲ, ನೆರವೇರಿಸಲು ಬಂದಿದ್ದೇನೆ.


“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು!” ಎಂದು ಪವಿತ್ರ ವೇದದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಉತ್ತಮವಾದದ್ದನ್ನು ಮಾಡುವವರಾಗಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು