Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:25 - ಕನ್ನಡ ಸಮಕಾಲಿಕ ಅನುವಾದ

25 ಮಳೆಯು ಸುರಿದು ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಆ ಮನೆ ಬೀಳಲಿಲ್ಲ. ಏಕೆಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಕಟ್ಟಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದದರಿಂದ ಅದು ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಿರುಸಾದ ಮಳೆಯು ಸುರಿದು ನೀರು ಮೇಲಕ್ಕೆ ಏರುತ್ತದೆ. ಗಾಳಿ ಬೀಸಿ ಆ ಮನೆಗೆ ಬಡಿಯುತ್ತದೆ. ಆದರೆ ಆ ಮನೆಯನ್ನು ಬಂಡೆಯ ಮೇಲೆ ಕಟ್ಟಿದ್ದರಿಂದ ಅದು ಬೀಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಪವ್ಸ್ ವೊತ್ಲೊ, ನ್ಹಯ್ಯಾ ಭರುನ್ ವೊತ್ಲ್ಯಾ, ಮೊಟೊ ವಾರೊ ಉಟ್ಲೊ ಅನಿ ತ್ಯಾ ವಾರ್‍ಯಾನ್ ಘರಾಕ್ ಮಾರ್‍ಲ್ಯಾನ್. ಖರೆ ತೆ ಘರ್ ಕೊಸ್ಳುನ್ ಪಡುಕ್ನಾ, ಕಶ್ಯಾಕ್ ಮಟ್ಲ್ಯಾರ್ ತೆ ಘರ್ ಗುಂಡ್ಯಾ ವರ್‍ತಿ ಭಾಂದಲ್ಲೆ ಹೊತ್ತೆ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:25
17 ತಿಳಿವುಗಳ ಹೋಲಿಕೆ  

ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು


ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು.


ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.


ದೇವರು ಬೆಳ್ಳಿಯನ್ನು ಪರಿಶೋಧಿಸಿ ಶುದ್ಧೀಕರಿಸುವ ಅಕ್ಕಸಾಲಿಗನಂತೆ ಕುಳಿತುಕೊಂಡು ಲೇವಿಯರನ್ನು ಶುದ್ಧಮಾಡುವರು. ಬಂಗಾರದ ಹಾಗೆಯೂ, ಬೆಳ್ಳಿಯ ಹಾಗೆಯೂ ಶುದ್ಧಮಾಡುವರು. ಆಗ ಅವರು ಯೆಹೋವ ದೇವರಿಗೆ ನೀತಿಯ ಕಾಣಿಕೆಯನ್ನು ಅರ್ಪಿಸುವರು.


ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು.


“ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.


ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ, ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಸಮಾನ.


ಮಳೆಯು ಸುರಿದು, ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆಗ ಆ ಮನೆ ಕುಸಿದು ಬಿತ್ತು. ಅದರ ಬೀಳುವಿಕೆಯು ಭಯಂಕರವಾಗಿತ್ತು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು