ಮತ್ತಾಯ 7:26 - ಕನ್ನಡ ಸಮಕಾಲಿಕ ಅನುವಾದ26 ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ, ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಸಮಾನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಮರಳಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನನಿಗೆ ಸಮನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಉಸುಬಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನ ಮನುಷ್ಯನನ್ನು ಹೋಲುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದವನು ಬುದ್ಧಿಹೀನನಾಗಿದ್ದಾನೆ. ಆ ಬುದ್ಧಿಹೀನನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 “ಖರೆ ಜೆ ಕೊನ್ ಹಿ ಮಾಜಿ ಗೊಸ್ಟಿಯಾ ಆಯಿಕ್ತಾ ಅನಿ ತೆಚೆ ಸರ್ಕೆ ಚಲಿನಾ ತೊ ರೆತಿ ವರ್‍ತಿ ಘರ್ ಭಾಂದ್ತಲ್ಯಾ ಎಕ್ ಪಿಶ್ಯಾ ಮಾನ್ಸಾ ಸರ್ಕೊ. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.