Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:3 - ಕನ್ನಡ ಸಮಕಾಲಿಕ ಅನುವಾದ

3 “ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯೋಚಿಸುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನಿನ್ನ ಸ್ವಂತ ಕಣ್ಣಿನಲ್ಲಿ ಇರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಏಕೆ ನೋಡುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಜ್ಯಾ ಡೊಳ್ಯಾತ್ನಿ ಹೊತ್ತ್ಯಾ ನಾಕ್ಡಾಕ್ಡೆ ಧ್ಯಾನ್ ದಿತಲೆ ಸೊಡುನ್, ತುಜ್ಯಾ ಭಾವಾಚ್ಯಾ ಡೊಳ್ಯಾತ್ಲ್ಯಾ ಬಾರಿಕ್ಲ್ಯಾ ಕಚ್ರ್ಯಾಕ್ಡೆ ತಿಯಾ ಕಶ್ಯಾಕ್ ಬಗ್ತೆಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:3
10 ತಿಳಿವುಗಳ ಹೋಲಿಕೆ  

ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ಫರಿಸಾಯನು ನಿಂತುಕೊಂಡು: ‘ದೇವರೇ, ಸುಲಿಗೆ ಮಾಡುವವರು, ಅನೀತಿವಂತರು, ವ್ಯಭಿಚಾರಿಗಳು ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ನಾನಲ್ಲ. ಆದ್ದರಿಂದ ನಾನು ನಿನಗೆ ಸ್ತೋತ್ರ ಮಾಡುತ್ತೇನೆ.


ನಿನ್ನ ಕಣ್ಣಿನಲ್ಲಿಯೇ ಮರದ ದಿಮ್ಮಿ ಇರುವಾಗ, ನಿನ್ನ ಸಹೋದರನಿಗೆ, ‘ನಾನು ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆದುಬಿಡುತ್ತೇನೆ,’ ಎಂದು ನೀನು ಹೇಳುವುದು ಹೇಗೆ?


ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು. ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು, ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.


ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು