Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:17 - ಕನ್ನಡ ಸಮಕಾಲಿಕ ಅನುವಾದ

17 ಹೀಗೆ, “ಅವರು ತಾವೇ ನಮ್ಮ ಬಲಹೀನತೆಗಳನ್ನು ತೆಗೆದುಕೊಂಡು, ನಮ್ಮ ರೋಗಗಳನ್ನು ಹೊತ್ತುಕೊಂಡರು,” ಎಂದು ಯೆಶಾಯ ಪ್ರವಾದಿಯು ಹೇಳಿದ್ದು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ, “ನಮ್ಮ ದುರ್ಬಲತೆಗಳನ್ನು ವಹಿಸಿಕೊಂಡನು; ನಮ್ಮ ರೋಗರುಜಿನಗಳನ್ನು ಆತನೇ ಪರಿಹರಿಸಿದನು,” ಎಂಬ ಯೆಶಾಯನ ಪ್ರವಾದನೆ ಈಡೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದರಿಂದ ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು ಎಂದು ಯೆಶಾಯನೆಂಬ ಪ್ರವಾದಿಯಿಂದ ಹೇಳಿರುವ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆತನು ನಮ್ಮ ಬೇನೆಗಳನ್ನು ತೆಗೆದುಕೊಂಡನು, ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಪ್ರವಾದಿಯಾದ ಯೆಶಾಯನು ಹೇಳಿದ್ದು ಇದರ ಮೂಲಕ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಇಸಾಯಿಯಾ ಪ್ರವಾದ್ಯಾನ್, “ತೆನಿ ಅಮ್ಚಿ ದುಕ್ನಿ ಅಪ್ನಾಚ್ಯಾ ವರ್‍ತಿ ಘೆಟ್ಲ್ಯಾನ್ ಅನಿ ಅಮ್ಚಿ ರೊಗಾ ಅಪ್ನಾ ವರ್‍ತಿ ವಾವುನ್ ಘೆವ್ನ್ ಗೆಲ್ಯಾನ್.” ಮನುನ್ ಸಾಂಗಟಲ್ಲೆ ಪುರಾ ಹೊವ್‍ಸಾಟ್ನಿ ತೆನಿ ಅಶೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:17
9 ತಿಳಿವುಗಳ ಹೋಲಿಕೆ  

ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು; ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು. ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು:


ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು.


ಹೀಗೆ ಹೆರೋದನು ಸಾಯುವವರೆಗೆ ಯೋಸೇಫನು ಅಲ್ಲೇ ಇದ್ದನು. ಕರ್ತನು ತನ್ನ ಪ್ರವಾದಿಯ ಮೂಲಕ: “ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು,” ಎಂದು ಹೇಳಿದ ಮಾತು ಇದರಿಂದ ನೆರವೇರಿತು.


ಆ ಸಂಜೆ ಸೂರ್ಯಾಸ್ತವಾದ ಮೇಲೆ ಜನರು ಅಸ್ವಸ್ಥರಾದವರನ್ನು ಮತ್ತು ದೆವ್ವಪೀಡಿತರನ್ನು ಯೇಸುವಿನ ಬಳಿಗೆ ಕರೆತಂದರು.


ಸಂಜೆಯಾದ ನಂತರ, ನಾನಾ ವಿಧವಾದ ರೋಗಗಳಿಂದ ಅಸ್ವಸ್ಥರಾದವರೆಲ್ಲರನ್ನು ಜನರು ಯೇಸುವಿನ ಬಳಿಗೆ ಕರೆತಂದರು, ಅವರಲ್ಲಿ ಪ್ರತಿಯೊಬ್ಬನ ಮೇಲೆ ಯೇಸು ತಮ್ಮ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದರು.


ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು.


ಅಬ್ರಹಾಮನು ದಹನಬಲಿಗಳ ಕಟ್ಟಿಗೆಗಳನ್ನು ತೆಗೆದುಕೊಂಡು, ತನ್ನ ಮಗ ಇಸಾಕನ ಮೇಲೆ ಹೊರಿಸಿ; ಬೆಂಕಿಯನ್ನೂ, ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡನು. ಅವರಿಬ್ಬರೂ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು