Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:20 - ಕನ್ನಡ ಸಮಕಾಲಿಕ ಅನುವಾದ

20 ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ಜೆಜುನ್ ತೆಕಾ, “ಕೊಲ್ಯಾಕ್ನಿ ಢುರೆ ಹಾತ್ ಮಳ್ಬಾ ವೈಲ್ಯಾ ಫಾಂಕ್ರಾಕ್ನಿ ಘಂಟೆ ಹಾತ್, ಖರೆ ಮಾನ್ಸಾಚೊ ಲೆಕ್ ಮನುನ್ ಬಲ್ವುತಲ್ಯಾ ಮಾಕಾ ಟಕ್ಲೆ ಟೆಕುಕ್ ಸೈತ್ ಜಾಗೊ ನಾ”. ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:20
35 ತಿಳಿವುಗಳ ಹೋಲಿಕೆ  

ಓ ಸೇನಾಧೀಶ್ವರ ಯೆಹೋವ ದೇವರೇ, ನನ್ನ ಅರಸರಾಗಿರುವವರೇ, ನನ್ನ ದೇವರೇ, ಗುಬ್ಬಿಯು ಮನೆಯನ್ನೂ, ಬಾನಕ್ಕಿಯು ತನ್ನ ಮರಿಗಳನ್ನಿಡುವ ಗೂಡನ್ನೂ ನಿಮ್ಮ ಬಲಿಪೀಠಗಳ ಬಳಿಯಲ್ಲಿ ದೊರಕಿತಲ್ಲಾ.


ಮರಿಯಳು ತನ್ನ ಚೊಚ್ಚಲು ಮಗನನ್ನು ಹೆತ್ತು, ಬಟ್ಟೆಗಳಿಂದ ಸುತ್ತಿ, ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಶಿಶುವನ್ನು ದನದ ಕೊಟ್ಟಿಗೆಯಲ್ಲಿ ಮಲಗಿಸಿದಳು.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಅವರು ಅವಸರದಿಂದ ಹೋಗಿ ಮರಿಯಳನ್ನೂ ಯೋಸೇಫನನ್ನೂ ಕೊಟ್ಟಿಗೆಯಲ್ಲಿ ಮಲಗಿದ್ದ ಶಿಶುವನ್ನು ಕಂಡರು.


ಅಲ್ಲಿ ಬಟ್ಟೆಯಿಂದ ಸುತ್ತಿರುವ ಶಿಶುವು ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ಇದೇ ನಿಮಗೆ ಗುರುತು,” ಎಂದು ಹೇಳಿದನು.


ಏಕೆಂದರೆ ನಾನು ಬಡವನೂ ಅಗತ್ಯತೆಯಲ್ಲಿ ಇರುವವನೂ ಆಗಿದ್ದೇನೆ; ನನ್ನ ಹೃದಯವು ನನ್ನ ಅಂತರಂಗದಲ್ಲಿ ಗಾಯಗೊಂಡಿದೆ.


ದೇವರೇ, ನಾನು ನೊಂದು ವ್ಯಥೆಗೊಂಡಿದ್ದೇನೆ. ನಿಮ್ಮ ರಕ್ಷಣೆಯು ನನ್ನನ್ನು ಕಾಪಾಡಲಿ.


ಹೆರೋದನ ಅರಮನೆಯ ಗೃಹ ನಿರ್ವಾಹಕನಾದ ಕೂಜನ ಪತ್ನಿ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕರು ತಮ್ಮ ಆಸ್ತಿಯಿಂದ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರಮಾಡುತ್ತಿದ್ದರು.


ಯಾರಾದರೂ ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ, ಈ ಯುಗದಲ್ಲೇ ಆಗಲಿ ಬರುವ ಯುಗದಲ್ಲೇ ಆಗಲಿ ಅದಕ್ಕಾಗಿ ಅವರಿಗೆ ಕ್ಷಮೆ ದೊರಕುವುದಿಲ್ಲ.


ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ತುರಾಯಿ ಗಿಡಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.


ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.


ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.


ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತಗಳಿಗೆ ಬಂದಾಗ ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು.


ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.


ಏಕೆಂದರೆ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದೇನೆ,” ಎಂದು ಹೇಳಿದರು.


ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ; ಆದರೂ ಯೆಹೋವ ದೇವರು ನನ್ನ ಹಿತಚಿಂತಕರಾಗಿದ್ದಾರೆ. ನನ್ನ ದೇವರೇ ನೀವೇ ನನ್ನ ಸಹಾಯವೂ ನನ್ನ ವಿಮೋಚಕರೂ ಆಗಿದ್ದೀರಿ, ನೀವು ತಡಮಾಡಬೇಡಿರಿ.


“ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ಆಕಾಶದ ಪಕ್ಷಿಗಳು, ಅವುಗಳ ಹತ್ತಿರ ವಾಸವಾಗಿದ್ದು, ಕೊಂಬೆಗಳ ಮಧ್ಯದಲ್ಲಿಂದ ಹಾಡುತ್ತವೆ.


ಯೇಸು ಉತ್ತರವಾಗಿ ಅವರಿಗೆ, “ಒಳ್ಳೆಯ ಬೀಜ ಬಿತ್ತುವವನು ಮನುಷ್ಯಪುತ್ರನು.


ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು.


ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.


“ಆದರೆ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬರನ್ನು, ಮನುಷ್ಯಪುತ್ರನಾದ ನಾನು ಸಹ ದೇವದೂತರ ಮುಂದೆ ನನ್ನವರೆಂದು ಒಪ್ಪಿಕೊಳ್ಳುವೆನು.


ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?” ಎಂದರು.


ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.


ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.


ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.


ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಮೇಲೆ ಎತ್ತಿದ ಹಾಗೆಯೇ ಮನುಷ್ಯಪುತ್ರನಾದ ನನ್ನನ್ನು ಸಹ ಮೇಲಕ್ಕೆ ಏರಿಸಬೇಕು.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ.


ಹಾಗಾದರೆ ಮನುಷ್ಯಪುತ್ರನಾದ ನಾನು ಮೊದಲಿದ್ದ ಕಡೆಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?


ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು.


ಅವನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಪುತ್ರನಾದ ನಾನು ಮಹಿಮೆ ಹೊಂದಲಿದ್ದೇನೆ. ದೇವರೂ ನನ್ನಲ್ಲಿ ಮಹಿಮೆ ಹೊಂದುವರು.


“ನೋಡಿರಿ, ಪರಲೋಕ ತೆರೆದಿರುವುದನ್ನೂ ಮನುಷ್ಯಪುತ್ರ ಆಗಿರುವ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ಕಾಣುತ್ತಿದ್ದೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು