Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:27 - ಕನ್ನಡ ಸಮಕಾಲಿಕ ಅನುವಾದ

27 ಆದರೆ ಶಿಷ್ಯರು ಆಶ್ಚರ್ಯದಿಂದ, “ಇವರು ಎಂಥಾ ಮನುಷ್ಯನಾಗಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಜನರು ಬೆರಗಾಗಿ - ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಜನರೆಲ್ಲರೂ ಆಶ್ಚರ್ಯಪಟ್ಟರು. “ಈತನು ಎಂತಹ ಮನುಷ್ಯ? ಬಿರುಗಾಳಿ ಮತ್ತು ನೀರು ಈತನಿಗೆ ವಿಧೇಯವಾಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತೆನಿ ಸಗ್ಳೆ ಜಾನಾ ಅಜಾಪ್ ಹೊಲೆ, ಅನಿ, “ಹ್ಯೊ ಕಸ್ಲೊ ಮಾನುಸ್ ಅಸಿಲ್? ವಾರೊ ಅನಿ ಲ್ಹಾಟಾ ಸೈತ್ ಹೆಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್!” ಮನುನ್ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:27
8 ತಿಳಿವುಗಳ ಹೋಲಿಕೆ  

ಜನರು ಅತ್ಯಂತ ಆಶ್ಚರ್ಯಪಟ್ಟು, “ಯೇಸು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ. ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರೆ,” ಎಂದುಕೊಳ್ಳುತ್ತಿದ್ದರು.


ಆಮೇಲೆ ಯೇಸು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಗಾಳಿ ನಿಂತುಹೋಯಿತು. ಅವರು ಬಹು ಆಶ್ಚರ್ಯಗೊಂಡರು.


ಜನರೆಲ್ಲರು ಇದನ್ನು ಕಂಡು ವಿಸ್ಮಯಗೊಂಡು, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ಅಶುದ್ಧಾತ್ಮಗಳಿಗೆ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಮೂಕರು ಮಾತನಾಡುವುದನ್ನೂ ಊನವಾದವರು ಸ್ವಸ್ಥರಾಗಿರುವುದನ್ನೂ ಕುಂಟರು ನಡೆದಾಡುವುದನ್ನೂ ಕುರುಡರು ಕಾಣುವುದನ್ನೂ ಜನಸಮೂಹದವರು ಕಂಡು ಆಶ್ಚರ್ಯಪಟ್ಟರು. ಅವರು ಇಸ್ರಾಯೇಲಿನ ದೇವರನ್ನು ಕೊಂಡಾಡಿದರು.


ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು.


ಯೇಸು ಇದನ್ನು ಕೇಳಿ, ಆಶ್ಚರ್ಯಪಟ್ಟು ತಮ್ಮ ಹಿಂದೆ ಬರುತ್ತಿದ್ದವರಿಗೆ, “ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.


ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.


ಯೇಸು ಆಚೆಯ ಕಡೆಯಲ್ಲಿದ್ದ ಗದರೇನರ ಪ್ರಾಂತಕ್ಕೆ ಬಂದಾಗ, ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಬಂದು ಯೇಸುವಿಗೆ ಎದುರಾದರು. ಅವರು ಬಹು ಕ್ರೂರಿಗಳಾಗಿದ್ದುದರಿಂದ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು