Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:28 - ಕನ್ನಡ ಸಮಕಾಲಿಕ ಅನುವಾದ

28 ಯೇಸು ಆಚೆಯ ಕಡೆಯಲ್ಲಿದ್ದ ಗದರೇನರ ಪ್ರಾಂತಕ್ಕೆ ಬಂದಾಗ, ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಬಂದು ಯೇಸುವಿಗೆ ಎದುರಾದರು. ಅವರು ಬಹು ಕ್ರೂರಿಗಳಾಗಿದ್ದುದರಿಂದ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ಕಡೆಯಿದ್ದ ಗದರೇನ ಎಂಬ ಪ್ರಾಂತ್ಯಕ್ಕೆ ಬಂದರು. ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಹೊರಬಂದು ಅವರಿಗೆ ಎದುರಾದರು. ಅವರಿಬ್ಬರೂ ಮಹಾಕ್ರೂರಿಗಳು. ಈ ಕಾರಣ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಮುಟ್ಟಿದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಬಹು ಉಗ್ರರಾಗಿದ್ದದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡಲಾರದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೇಸು ಸರೋವರದ ಮತ್ತೊಂದು ತೀರದಲ್ಲಿದ್ದ ಗದರೇನ ಪ್ರಾಂತ್ಯಕ್ಕೆ ಬಂದನು. ಅಲ್ಲಿ ದೆವ್ವಗಳಿಂದ ಪೀಡಿತರಾಗಿದ್ದ ಇಬ್ಬರು ಯೇಸುವಿನ ಬಳಿಗೆ ಬಂದರು. ಅವರು ಸಮಾಧಿಯ ಗವಿಗಳಲ್ಲಿ ವಾಸವಾಗಿದ್ದರು ಮತ್ತು ಬಹಳ ಅಪಾಯಕಾರಿಗಳಾಗಿದ್ದರು. ಆದ್ದರಿಂದ ಜನರು ಆ ಮಾರ್ಗದಲ್ಲಿ ಹೋಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಜೆಜು ಸಮುಂದರಾಚ್ಯಾ ತಿಕುಲ್ಯಾ ಬಾಜುನ್ ಗೆದರಾ ಮನ್ತಲ್ಯಾ ಜಾಗ್ಯಾಕ್ ಯವ್ನ್ ಪಾವಲ್ಲ್ಯಾ ತನ್ನಾ ಲೊಕಾಕ್ನಿ ಮಾಟಿ ದಿತಲ್ಯಾ ಸಮಾದ್ಯಾನಿತ್ನಾ ದೊಗೆ ಜಾನಾ ಗಿರೆಲಾಗಲ್ಲಿ ಮಾನ್ಸಾ ಭಾಯ್ರ್ ಯೆವ್ನ್ ತೆಕಾ ಭೆಟ್ಲಿ. ತೆನಿ ಲೈ ಭಯನಾಕ್ ಹೊತ್ತ್ಯಾನಿ, ತಸೆಮನುನ್ ಕೊನ್‍ಬಿ ತ್ಯಾ ವಾಟೆನ್ ಫಿರುನ್ ಖೆಳಿನಸಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:28
9 ತಿಳಿವುಗಳ ಹೋಲಿಕೆ  

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


“ಅನಾತನ ಮಗ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿವಸಗಳಲ್ಲಿಯೂ ಹೆದ್ದಾರಿಯ ಸಂಚಾರ ನಿಂತುಹೋಯಿತು. ಪ್ರಯಾಣಿಕರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.


ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ಹೇಳಿದರು.


ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು


ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.


ಆದರೆ ಶಿಷ್ಯರು ಆಶ್ಚರ್ಯದಿಂದ, “ಇವರು ಎಂಥಾ ಮನುಷ್ಯನಾಗಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು