Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:29 - ಕನ್ನಡ ಸಮಕಾಲಿಕ ಅನುವಾದ

29 ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅವರಿಬ್ಬರು ಯೇಸುವಿನ ಬಳಿಗೆ ಬಂದು. “ನೀನು ನಮಗೆ ಏನು ಮಾಡಬೇಕೆಂದಿರುವೆ? ದೇವಕುಮಾರನೇ, ನೇಮಿತ ಕಾಲಕ್ಕಿಂತ ಮುಂಚೆಯೇ ನಮ್ಮನ್ನು ಶಿಕ್ಷಿಸಲು ಇಲ್ಲಿಗೆ ಬಂದೆಯಾ?” ಎಂದು ಗಟ್ಟಿಯಾಗಿ ಕೂಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತೆನಿ ಎಗ್ದಮ್, “ದೆವಾಚ್ಯಾ ಲೆಕಾ ಅಮ್ಚ್ಯಾಕ್ನಾ ತುಕಾ ಕಾಯ್‍ ಪಾಜೆ? ಅಮ್ಚೊ ಎಳ್ ಯೆವ್ಚ್ಯಾ ಅದ್ದಿಚ್ ಅಮ್ಕಾ ಶಿಕ್ಷಾ ದಿವ್ಕ್ ಯೆಲೆ ಕಾಯ್?” ಮನುನ್ ಕಿಂಚ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:29
20 ತಿಳಿವುಗಳ ಹೋಲಿಕೆ  

ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.


“ನಜರೇತಿನ ಯೇಸುವೇ, ನಮ್ಮ ಗೊಡವೆ ನಿಮಗೆ ಏಕೆ? ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರಾ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರ ಪರಿಶುದ್ಧರು,” ಎಂದು ಹೇಳಿದನು.


ದೇವರು ಒಬ್ಬರೇ ಎಂದು ನೀನು ನಂಬುತ್ತೀ, ಅದು ಒಳ್ಳೆಯದು, ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.


ಅವನು ಯೇಸುವನ್ನು ಕಂಡಾಗ, ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಮಹೋನ್ನತ ದೇವಪುತ್ರರೇ, ನನ್ನ ಗೊಡವೆ ನಿಮಗೆ ಏಕೆ? ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.


ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು.


ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.


ಯೇಸು ಆಕೆಗೆ, “ಅಮ್ಮಾ, ನಾನು ನಿಮಗೆ ಏನು ಮಾಡಲು ಬಯಸುತ್ತೀರಿ? ನನ್ನ ಸಮಯವು ಇನ್ನೂ ಬಂದಿಲ್ಲ,” ಎಂದು ಹೇಳಿದರು.


ಅನೇಕರೊಳಗಿಂದ, ದೆವ್ವಗಳು ಸಹ ಹೊರಗೆ ಬಂದು, “ನೀವು ದೇವರ ಪುತ್ರ” ಎಂದು ಅರಚಿದವು. ಯೇಸು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದರು. ಏಕೆಂದರೆ ಅವರೇ ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.


ಆದರೆ ಅರಸನು, “ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ. ಏಕೆಂದರೆ, ‘ದಾವೀದನನ್ನು ದೂಷಿಸು,’ ಎಂದು ಯೆಹೋವ ದೇವರು ಅವನಿಗೆ ಹೇಳಿದ್ದಾರೆ. ಹಾಗಾದರೆ, ‘ಏಕೆ ಹೀಗೆ ಮಾಡುತ್ತೀ?’ ಎಂದು ಹೇಳುವವನ್ಯಾರು?” ಎಂದನು.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.


ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.


ದುರಾತ್ಮಗಳು ಯೇಸುವನ್ನು ಕಂಡಾಗಲೆಲ್ಲಾ ಅವರ ಮುಂದೆ ಬಿದ್ದು, “ನೀವು ದೇವರ ಪುತ್ರ,” ಎಂದು ಕಿರುಚಿದವು.


ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು.


ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು.


“ಟೈರೇ, ಸೀದೋನೇ, ಫಿಲಿಷ್ಟಿಯದ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರೋಧವಾಗಿ ನಿಮಗೆ ಏನು ಇದೆ? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ಮುಯ್ಯಿ ನನಗೆ ಸಲ್ಲಿಸಿದರೆ, ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.


ಯೆಫ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವುದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು?” ಎಂದು ಹೇಳಿ ಕಳುಹಿಸಿದನು.


ಎಲೀಷನು ಇಸ್ರಾಯೇಲಿನ ಅರಸನಿಗೆ, “ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆಯ ಪ್ರವಾದಿಗಳ ಬಳಿಗೂ, ನಿನ್ನ ತಾಯಿಯ ಪ್ರವಾದಿಗಳ ಬಳಿಗೂ ಹೋಗು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ಇಲ್ಲ, ಯೆಹೋವ ದೇವರು ಈ ಮೂರು ಮಂದಿ ಅರಸರನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕೆ ಒಟ್ಟಾಗಿ ಕರೆದಿದ್ದಾರಲ್ಲಾ,” ಎಂದನು.


ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ, “ಯೆಹೂದದ ಅರಸನೇ, ನನಗೆ ನೀನು ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ. ನಾನು ಯುದ್ಧಮಾಡುವ ವೈರಿಯ ಮೇಲೆಯೇ ದಾಳಿಮಾಡುತ್ತೇನೆ. ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾರೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶಮಾಡದ ಹಾಗೆ ನೀನು ದೇವರ ಮುಂದೆ ಸುಮ್ಮನಿರು.”


ಆಗ ಅವರಿಂದ ಸ್ವಲ್ಪ ದೂರದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು