ಮತ್ತಾಯ 8:4 - ಕನ್ನಡ ಸಮಕಾಲಿಕ ಅನುವಾದ4 ಆಗ ಯೇಸು ಅವನಿಗೆ, “ನೋಡು ಇದನ್ನು ನೀನು ಯಾರಿಗೂ ಹೇಳಬೇಡ, ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಜನರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;” ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಯೇಸು ಅವನಿಗೆ - ಯಾರಿಗೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇವಿುಸಿದ ಕಾಣಿಕೆಯನ್ನು ಕೊಡು; ಅದು ಜನರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ಜೆಜುನ್ ತೆಕಾ, “ಹಿತ್ತೆ ಆಯ್ಕ್! ಹೆ ಕೊನಾಕ್ಬಿ ಸಾಂಗುನಕೊ, ನಿಟ್ಟ್ ಯಾಜಕಾಕ್ಡೆ ಜಾ, ಅನಿ ತೊ ತುಕಾ ತಪಾಸುನ್ ಬಗುಂದಿ. ಅನಿ ಮಾನಾ ತಿಯಾ ಗುನ್ ಹೊಲೆ ಮನುನ್ ಸಗ್ಳ್ಯಾಕ್ನಿ ಕಳುಸಾಟ್ನಿ ಮೊಯ್ಜೆನ್ ಸಾಂಗಲ್ಲಿ ದೆನ್ಗಿ ದಿ”. ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |