Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:6 - ಕನ್ನಡ ಸಮಕಾಲಿಕ ಅನುವಾದ

6 “ಸ್ವಾಮೀ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಘೋರವಾಗಿ ನರಳುತ್ತಾ ಮನೆಯಲ್ಲಿ ಹಾಸಿಗೆ ಹಿಡಿದಿದ್ದಾನೆ,” ಎಂದು ಹೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಪ್ರಭೂ, ನನ್ನ ಸೇವಕ ಮನೆಯಲ್ಲಿ ಪಾರ್ಶ್ವವಾಯು ರೋಗದಿಂದ ಹಾಸಿಗೆ ಹಿಡಿದಿದ್ದಾನೆ. ಬಹಳವಾಗಿ ನರಳುತ್ತಿದ್ದಾನೆ,” ಎಂದು ವಿನಂತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪ್ರಭುವೇ, ನನ್ನ ಆಳು ಪಾರ್ಶ್ವವಾಯುವಿನಿಂದ ಬಹಳ ಕಷ್ಟಪಡುತ್ತಾ ಮನೆಯಲ್ಲಿ ಬಿದ್ದಿದ್ದಾನೆ ಎಂದು ಹೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಪ್ರಭುವೇ, ನನ್ನ ಸೇವಕನು ಕಾಯಿಲೆಯಿಂದ ಹಾಸಿಗೆಯ ಮೇಲಿದ್ದಾನೆ. ಅವನು ಬಹಳ ನೋವಿನಿಂದ ನರಳುತ್ತಿದ್ದಾನೆ” ಎಂದು ಸಹಾಯಕ್ಕಾಗಿ ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 “ಧನಿಯಾ, ಮಾಜೊ ಆಳ್ ವಾರ್‍ಯಾನ್‍ ಮಾರುನ್ ಹಾತ್ರಾನಾತ್ ಪಡ್ಲಾ, ತೊ ಲೈ ತರಾಸ್ ಕರುನ್ ಘೆವ್ಲಾ”. ಮನುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:6
12 ತಿಳಿವುಗಳ ಹೋಲಿಕೆ  

ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ, ಯೋಗ್ಯವಾದದ್ದನ್ನೂ ಕೊಡಿರಿ.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ಅಲ್ಲಿ ಐನೇಯ ಎಂಬ ಹೆಸರಿನ ಒಬ್ಬಾತನನ್ನು ಸಂದರ್ಶಿಸಿದನು. ಅವನು ಪಾರ್ಶ್ವವಾಯು ರೋಗ ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದನು.


ಇನ್ನು ಮೇಲೆ ಅವನು ದಾಸನಾಗದೆ, ದಾಸನಿಗಿಂತ ಮೇಲಾಗಿ ಪ್ರಿಯ ಸಹೋದರನಂತಾಗಬೇಕು. ಅವನು ವಿಶೇಷವಾಗಿ ನನಗೆ ಬಹು ಪ್ರಿಯನಾಗಿದ್ದಾನೆ. ಆದರೂ ಓನೇಸಿಮನು ನಿನಗೆ ಮಾನವ ರೀತಿಯಲ್ಲಿಯೂ ಕರ್ತ ಯೇಸುವಿನಲ್ಲಿಯೂ ಒಬ್ಬ ಸಹೋದರನಾಗಿ ಇನ್ನು ಎಷ್ಟೋ ಪ್ರಿಯನಾಗಿರಬೇಕಲ್ಲವೇ.


ವಿಶ್ವಾಸಿಗಳಾದ ಯಜಮಾನರಿರುವವರು ಆ ಯಜಮಾನರು ಸಹೋದರನಾಗಿರುವುದರಿಂದ ಅವರನ್ನು ತಾತ್ಸಾರ ಮಾಡದಿರಲಿ. ಏಕೆಂದರೆ ತಮ್ಮ ಸೇವೆಯಿಂದ ಲಾಭ ಹೊಂದುವವರು ವಿಶ್ವಾಸಿಗಳು ಮತ್ತು ತಮಗೆ ಪ್ರಿಯರಾಗಿದ್ದಾರೆ ಎಂದು ತಿಳಿದು ಅವರಿಗೆ ಉತ್ತಮ ಸೇವೆಮಾಡಲಿ. ಇವುಗಳನ್ನು ಅವರಿಗೆ ಬೋಧಿಸಿ ಎಚ್ಚರಿಸು.


ತನ್ನೊಂದಿಗೆ ಮಾತನಾಡಿದ ದೇವದೂತನು ಅದೃಶ್ಯವಾದ ಮೇಲೆ ಕೊರ್ನೇಲ್ಯನು ತನ್ನ ಇಬ್ಬರು ಸೇವಕರನ್ನು ಮತ್ತು ತನ್ನ ಪರಿಚಾರಕರಲ್ಲಿ ಭಕ್ತಿವಂತನಾದ ಒಬ್ಬ ಸಿಪಾಯಿಯನ್ನು ಕರೆದು,


ಅನೇಕರಿಂದ ಅಶುದ್ಧಾತ್ಮಗಳು ಆರ್ಭಟಿಸುತ್ತಾ ಹೊರಗೋಡಿದವು. ಮಾತ್ರವಲ್ಲದೇ ಅನೇಕ ಪಾರ್ಶ್ವವಾಯು ಪೀಡಿತರು, ಅಂಗವಿಕಲರು ಸ್ವಸ್ಥರಾದರು.


ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.


ಯೇಸು ಅವನಿಗೆ, “ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು