ಮತ್ತಾಯ 8:9 - ಕನ್ನಡ ಸಮಕಾಲಿಕ ಅನುವಾದ9 ಏಕೆಂದರೆ ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು’ ಎಂದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ, ‘ಬಾ’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು. ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು, ‘ಬಾ’ ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ, ‘ಹೋಗು’ ಎಂದರೆ ಹೋಗುತ್ತಾನೆ. ಸೇವಕನಿಗೆ, ‘ಇಂಥದ್ದನ್ನು ಮಾಡು’ ಎಂದರೆ ಮಾಡುತ್ತಾನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ಸಹ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನು ಸಹ ಬೇರೆ ಅಧಿಕಾರಿಗಳ ಅಧೀನದಲ್ಲಿದ್ದೇನೆ. ನನ್ನ ಅಧೀನದಲ್ಲಿ ಸಿಪಾಯಿಗಳಿದ್ದಾರೆ. ನಾನು ಒಬ್ಬ ಸಿಪಾಯಿಗೆ ‘ಹೋಗು’ ಅಂದರೆ ಅವನು ಹೋಗುತ್ತಾನೆ; ಮತ್ತೊಬ್ಬ ಸಿಪಾಯಿಗೆ ‘ಬಾ’ ಅಂದರೆ ಅವನು ಬರುತ್ತಾನೆ. ನಾನು ನನ್ನ ಸೇವಕನಿಗೆ, ‘ಇದನ್ನು ಮಾಡು’ ಅಂದರೆ ಅವನು ವಿಧೇಯತೆಯಿಂದ ಮಾಡುತ್ತಾನೆ. ನಿನಗೂ ಇದೇ ರೀತಿಯ ಅಧಿಕಾರವಿದೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಕಶ್ಯಾಕ್ ಮಟ್ಲ್ಯಾರ್, ಮಿಯಾಬಿ ಮಾಜ್ಯಾನ್ ಮೊಟ್ಯಾ ಅದಿಕಾರ್‍ಯಾಚ್ಯಾ ಹಾತಿ ಖಾಲ್ತಿ ಹಾಂವ್. ಅನಿ ಮಾಜ್ಯಾ ಹಾತಿ ಖಾಲ್ತಿಬಿ ಲೈ ಸೈನಿಕಾ ಹಾತ್. ಎಕ್ಲ್ಯಾಕ್ ಮಿಯಾ ಜಾ! ಮಟ್ಲ್ಯಾರ್ ತೊ ಜಾತಾ: ಅನಿ ಯೆ! ಮಟ್ಲ್ಯಾರ್ ಯೆತಾ, ಅನಿ ಮಾಜ್ಯಾ ಆಳಾಕ್ ಹೆ ಕರ್! ಮನುನ್ ಸಾಂಗ್ಲ್ಯಾರ್ ತೊ ಕರ್‍ತಾ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |