Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:11 - ಕನ್ನಡ ಸಮಕಾಲಿಕ ಅನುವಾದ

11 ಫರಿಸಾಯರು ಇದನ್ನು ಕಂಡು, “ನಿಮ್ಮ ಬೋಧಕನು ಸುಂಕದವರ ಮತ್ತು ಅಪಖ್ಯಾತಿಯ ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇ?’ ಎಂದು ಆಕ್ಷೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಫರಿಸಾಯರು ಅದನ್ನು ನೋಡಿ ಆತನ ಶಿಷ್ಯರನ್ನು - ನಿಮ್ಮ ಗುರುವು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟಮಾಡುತ್ತಾನೆ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇದನ್ನು ಕಂಡ ಫರಿಸಾಯರು ಯೇಸುವಿನ ಶಿಷ್ಯರಿಗೆ, “ನಿಮ್ಮ ಬೋಧಕನು ಸುಂಕವಸೂಲಿಗಾರರೊಂದಿಗೆ ಮತ್ತು ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಉಲ್ಲ್ಯಾ ಫಾರಿಜೆವಾನಿ ಜೆಜುಚ್ಯಾ ಶಿಸಾಕ್ನಿ, “ತುಮ್ಚೊ ಗುರುಜಿ; ಪಾಪಿ ಅನಿ ತೆರ್‍ಗಿ ವಸುಲಿ ಕರ್‍ತಲ್ಯಾ ಲೊಕಾಂಚ್ಯಾ ವಾಂಗ್ಡಾ ಬಸುನ್ ಕಶ್ಯಾಕ್ ಜೆವ್ತಾ?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:11
14 ತಿಳಿವುಗಳ ಹೋಲಿಕೆ  

ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು. ಅದಕ್ಕೆ ಅವರು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕೃತ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದು ಹೇಳಿದರು.


ಆದರೆ ಫರಿಸಾಯರೂ ಅವರ ಗುಂಪಿಗೆ ಸೇರಿದ ನಿಯಮ ಬೋಧಕರೂ ಯೇಸುವಿನ ವಿರೋಧವಾಗಿ ಗೊಣಗಾಡುತ್ತಾ ಶಿಷ್ಯರಿಗೆ, “ನೀವು ಏಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ?” ಎಂದು ಕೇಳಿದರು.


ಫರಿಸಾಯರಾದ ನಿಯಮ ಬೋಧಕರು ಪಾಪಿಗಳ ಮತ್ತು ಸುಂಕದವರ ಸಂಗಡ ಯೇಸು ಊಟಮಾಡುವುದನ್ನು ಕಂಡು, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.


ಮಹಾಯಾಜಕನು ತಾನೂ ಬಲಹೀನ ಆಗಿರುವುದರಿಂದ ಆತನು ಅಜ್ಞಾನಿಗಳನ್ನೂ ಮಾರ್ಗ ತಪ್ಪಿದವರನ್ನೂ ಕುರಿತು ಕನಿಕರ ತೋರಿಸಬಲ್ಲನು.


“ನಾವಂತೂ ಹುಟ್ಟು ಯೆಹೂದ್ಯರು, ಪಾಪಿಗಳೆಂದು ಕರೆಯಲಾಗುವ ಯೆಹೂದ್ಯರಲ್ಲದವರಲ್ಲ.


ಇದನ್ನು ಕಂಡವರೆಲ್ಲರೂ, “ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ,” ಎಂದು ಗೊಣಗುಟ್ಟಿದರು.


‘ನಿನ್ನಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ. ಏಕೆಂದರೆ ನಿನಗಿಂತ ಪರಿಶುದ್ಧನಾಗಿದ್ದೇನೆ,’ ಎಂದು ಹೇಳುವರು. ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ, ದಿನವೆಲ್ಲಾ ಉರಿಯುವ ಬೆಂಕಿಯಾಗಿಯೂ ಇದ್ದಾರೆ.


ಈ ಬೋಧನೆಯನ್ನು ಒಪ್ಪದಿರುವ ಯಾರಾದರೂ ನಿಮ್ಮ ಬಳಿಗೆ ಬಂದರೆ, ಅವರನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವರಿಗೆ, “ವಂದನೆ” ಎಂದೂ ಹೇಳಬೇಡಿರಿ.


ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ?


ಇದಾದ ಮೇಲೆ ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ಅಪಖ್ಯಾತಿಯ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು.


“ಸುನ್ನತಿ ಇಲ್ಲದವರ ಮನೆಯೊಳಗೆ ಹೋಗಿ ಅವರೊಂದಿಗೆ ಊಟಮಾಡಿದೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು