Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:12 - ಕನ್ನಡ ಸಮಕಾಲಿಕ ಅನುವಾದ

12 ಆದರೆ ಯೇಸು ಇದನ್ನು ಕೇಳಿ ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೇಸು ಅದನ್ನು ಕೇಳಿ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದನ್ನು ಕೇಳಿಸಿಕೊಂಡ ಯೇಸು, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಫರಿಸಾಯರು ಹೇಳಿದ್ದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ಆರೋಗ್ಯವುಳ್ಳ ಜನರಿಗೆ ವೈದ್ಯನ ಅವಶ್ಯಕತೆಯಿಲ್ಲ. ಕಾಯಿಲೆಯ ಜನರಿಗೆ ವೈದ್ಯನು ಅವಶ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜುನ್ ತೆನಿ ಇಚಾರ್‍ತಲೆ ಆಯಿಕ್ಲ್ಯಾನ್, ಅನಿ ತೆಂಕಾ “ಅರಾಮ್ ಹೊತ್ತ್ಯಾಕ್ನಿ ವಗ್ದುಳ್ಯಾಚಿ ಗರಜ್ ನಾ. ಜೆ ಕೊನ್ ಶಿಕ್ ಹಾತ್ ತೆಂಕಾ ಎವ್ಡಿಚ್ ವಗ್ದುಳ್ಯಾಚಿ ಗರಜ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:12
17 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.


ಆದರೆ ಜನರು ಅದನ್ನು ತಿಳಿದು ಯೇಸುವನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವೀಕರಿಸಿ, ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥಮಾಡಿದರು.


ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


“ ‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.


ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿತನಾಗುವೆನು. ಏಕೆಂದರೆ, ನೀವೇ ನನಗೆ ಸ್ತುತ್ಯರು.


ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ, ಅವರ ಗಾಯಗಳನ್ನು ಕಟ್ಟುತ್ತಾರೆ.


“ನಾನು ಅವರ ಹಿಂಜಾರುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಏಕೆಂದರೆ ನನ್ನ ಕೋಪವು ಅವರ ಕಡೆಯಿಂದ ತಿರುಗಿಕೊಂಡಿದೆ.


ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಅವಳು ತನ್ನ ಆಸ್ತಿಯನ್ನೆಲ್ಲಾ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.


“ಯೆಹೋವ ದೇವರೇ, ನನಗೆ ಕರುಣೆ ತೋರಿಸಿ ನನ್ನನ್ನು ಸ್ವಸ್ಥಮಾಡಿರಿ, ಏಕೆಂದರೆ ನಿಮಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದು ನಾನು ಹೇಳಿ ಬೇಡುವೆನು.


ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಬಲಹೀನನಾಗಿದ್ದೇನೆ; ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿರಿ, ನನ್ನ ಎಲುಬುಗಳು ಬಹು ವ್ಯಥೆಗೊಳಗಾಗಿವೆ.


ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?


ಪ್ರಿಯ ವೈದ್ಯನಾದ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.


ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು