Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:13 - ಕನ್ನಡ ಸಮಕಾಲಿಕ ಅನುವಾದ

13 ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜಾವಾ, ಅನಿ ಪವಿತ್ರ್ ಪುಸ್ತಕ್, ಮಾಕಾ ದಯಾ ಪಾಜೆ, ಜನಾವರಾಂಚಿ ಬಲಿ ನಕ್ಕೊ ಮನುನ್ ಸಾಂಗಲ್ಲ್ಯಾಚೊ ಅರ್ತ್‍ ಕಾಯ್ ಮನುನ್ ಹುಡ್ಕುನ್‍ ಕಾಡಾ. ಮಿಯಾ ಧರ್ಮಾನಿ ಚಲ್ತಲ್ಯಾ ಲೊಕಾಂಚ್ಯಾ ಸಾಟ್ನಿ ಯೆವ್ಕ್ ನಾ, ಪಾಪಿ ಲೊಕಾಂಚ್ಯಾ ಸಾಟ್ನಿ ಯೆಲಾ”. ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:13
39 ತಿಳಿವುಗಳ ಹೋಲಿಕೆ  

ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.


ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.


ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ. ದಹನಬಲಿಗಳಿಗಿಂತ ದೇವರ ಅಂಗೀಕಾರವನ್ನೇ ಅಪೇಕ್ಷಿಸುತ್ತೇನೆ.


ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನೇ ದೇವರ ಕಡೆಗೆ ತಿರುಗಿಕೊಳ್ಳುವಂತೆ ಕರೆಯಲು ಬಂದೆನು,” ಎಂದರು.


ಆದರೆ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ, ನಿರಪರಾಧಿಗಳನ್ನು ಖಂಡಿಸುತ್ತಿರಲಿಲ್ಲ.


ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.


ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.


“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.


ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.


ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.


ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?


ಅದಕ್ಕೆ ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?


ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?


ಅದಕ್ಕೆ ಯೇಸು, “ ‘ನೀವು ದೇವರುಗಳು,’ ಎಂದು ದೇವರೇ ಹೇಳಿರುವುದಾಗಿ ನಿಮ್ಮ ನಿಯಮದಲ್ಲಿ ಬರೆದಿಲ್ಲವೋ?


ಯೇಸು ಉತ್ತರವಾಗಿ ಅವರಿಗೆ, “ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.


ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಉಲ್ಲಂಘಿಸಿದರೂ ನಿರ್ದೋಷಿಗಳಾಗಿದ್ದಾರೆಂದು ನೀವು ನಿಯಮದಲ್ಲಿ ಓದಲಿಲ್ಲವೇ?


ಯೇಸು ಅವನಿಗೆ, “ಮೋಶೆಯ ನಿಯಮದಲ್ಲಿ ಏನು ಬರೆದಿದೆ? ನೀನು ಅದನ್ನು ಹೇಗೆ ಓದುತ್ತೀ?” ಎಂದು ಕೇಳಿದರು.


ಅವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ಪ್ರೀತಿಸಿ, ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸುವುದು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಗಳಿಗಿಂತಲೂ ಹೆಚ್ಚಿನದಾಗಿದೆ,” ಎಂದನು.


ಅದಕ್ಕೆ ಯೇಸು, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು