Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:18 - ಕನ್ನಡ ಸಮಕಾಲಿಕ ಅನುವಾದ

18 ಯೇಸು ಇದೆಲ್ಲವನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ, ಸಭಾಮಂದಿರದ ಒಬ್ಬ ಅಧಿಕಾರಿಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ನೀವು ಬಂದು ಆಕೆಯ ಮೇಲೆ ನಿಮ್ಮ ಕೈಯನ್ನಿಡಿರಿ; ಆಗ ಅವಳು ಬದುಕುವಳು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗೆ ಆತನು ಅವರೊಂದಿಗೆ ಮಾತಾಡುತ್ತಿರುವಾಗ ಒಬ್ಬ ಅಧಿಕಾರಿ ಬಂದು ಆತನಿಗೆ ಅಡ್ಡಬಿದ್ದು - ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು ಎಂದು ಬೇಡಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಸು ಈ ಸಂಗತಿಗಳನ್ನು ಹೇಳುತ್ತಿರುವಾಗ ಸಭಾಮಂದಿರದ ಅಧಿಕಾರಿಯೊಬ್ಬನು ಆತನ ಬಳಿಗೆ ಬಂದು ಆತನಿಗೆ ಬಾಗಿ ನಮಸ್ಕರಿಸಿ, “ನನ್ನ ಮಗಳು ಈಗ ತಾನೇ ಸತ್ತುಹೋದಳು. ನೀನು ಬಂದು ಅವಳನ್ನು ಮುಟ್ಟಿದರೆ ಅವಳು ಮತ್ತೆ ಜೀವಂತಳಾಗುವಳು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜೆಜು, ಹೆ ಸಾಂಗುನ್ಗೆತುಚ್ ಹೊತ್ತೊ, ತನ್ನಾ ಎಕ್ ಜುದೆವಾಂಚೊ ಅದಿಕಾರಿ ಜೆಜುಕ್ಡೆ ಯೆಲೊ, ಅನಿ ಡೊಗ್ಲಾ ಘಾಲುನ್ ಜೆಜುಕ್, “ ಮಾಜಿ ಲೆಕ್ ಅತ್ತಾ-ಅತ್ತಾಚ್ ಮರ್ಲಿ. ಖರೆ ತಿಯಾ ಯೆವ್ನ್ ತಿಚೆ ವರ್‍ತಿ ಹಾತ್ ಥವ್ ತಿ ಹುರ್ತಾ”. ಮನುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:18
25 ತಿಳಿವುಗಳ ಹೋಲಿಕೆ  

ಅಲ್ಲಿಗೆ ಕುಷ್ಠರೋಗಿಯಾಗಿದ್ದ ಒಬ್ಬನು ಬಂದು, ಯೇಸುವಿನ ಮುಂದೆ ಮೊಣಕಾಲೂರಿ, “ಕರ್ತನೇ, ನೀವು ಮನಸ್ಸು ಮಾಡಿದರೆ, ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದನು.


ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, “ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ,” ಎಂದನು.


ಯೇಸು ಇದ್ದ ಸ್ಥಳಕ್ಕೆ ಮರಿಯಳೂ ಬಂದು ಅವರನ್ನು ಕಂಡು ಅವರ ಪಾದಗಳಿಗೆ ಬಿದ್ದು, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದು ಹೇಳಿದಳು.


ಅವರಿಗೆ, “ಹೊರಗೆ ಹೋಗಿರಿ, ಬಾಲಕಿಯು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಅದಕ್ಕವರು ನಕ್ಕು ಯೇಸುವನ್ನು ಹಾಸ್ಯಮಾಡಿದರು.


ಆಗ ನಾಮಾನನು ಕೋಪಗೊಂಡು ಹೊರಟುಹೋಗಿ, “ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು, ತನ್ನ ದೇವರಾದ ಯೆಹೋವ ದೇವರ ಹೆಸರನ್ನು ಕರೆದು, ನನ್ನ ಚರ್ಮದ ಮೇಲೆ ತನ್ನ ಕೈಯನ್ನಾಡಿಸಿ, ಕುಷ್ಠರೋಗವನ್ನು ವಾಸಿಮಾಡುವನೆಂದು, ನಾನು ನೆನಸಿದೆ.


ನಿಯಮ ಮತ್ತು ಪ್ರವಾದಿಗಳ ಗ್ರಂಥವು ಪಾರಾಯಣವಾದ ತರುವಾಯ, ಸಭಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಪ್ರೋತ್ಸಾಹ ಕೊಡುವ ಸಂದೇಶ ನಿಮ್ಮಲ್ಲಿದ್ದರೆ, ಮಾತನಾಡಿರಿ,” ಎಂದು ಕೇಳಿಕೊಂಡರು.


ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.


ಒಬ್ಬ ಅಧಿಕಾರಿಯು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು.


ಆಗ ಒಬ್ಬ ಶತಾಧಿಪತಿಗೆ, ಪ್ರಿಯನಾಗಿದ್ದ ಸೇವಕ, ಅಸ್ವಸ್ಥನಾಗಿ ಸಾಯುವುದರಲ್ಲಿದ್ದನು.


ಅವರು ಯೇಸುವನ್ನು ಕಂಡು ಆರಾಧಿಸಿದರು. ಆದರೆ ಕೆಲವರು ಸಂದೇಹ ಪಟ್ಟರು.


ಅವರು ಜನಸಮೂಹದ ಬಳಿಗೆ ಬಂದಾಗ, ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ,


ಆಕೆಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮೀ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡಳು.


ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು.


ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುವಿನ ಬಳಿಗೆ ಬಂದು, ಅವರ ಮುಂದೆ ಮೊಣಕಾಲೂರಿ ಬೇಡಿಕೊಂಡಳು.


ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಕರ್ತನೇ, ಕಾಪಾಡು! ನಾವು ಮುಳುಗುತ್ತಿದ್ದೇವೆ!” ಎಂದರು.


ಅಂತೆಯೇ ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ಅವರು ಹಾಗೇನಾದರೂ ಮಾಡಿದರೆ ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ. ಆಗ ಅವೆರಡೂ ಉಳಿಯುತ್ತವೆ,” ಎಂದರು.


ಯೇಸು ಎದ್ದು ತಮ್ಮ ಶಿಷ್ಯರೊಂದಿಗೆ ಆ ಅಧಿಕಾರಿಯ ಹಿಂದೆ ಹೋದರು.


ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು