Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:24 - ಕನ್ನಡ ಸಮಕಾಲಿಕ ಅನುವಾದ

24 ಅವರಿಗೆ, “ಹೊರಗೆ ಹೋಗಿರಿ, ಬಾಲಕಿಯು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಅದಕ್ಕವರು ನಕ್ಕು ಯೇಸುವನ್ನು ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಎಲ್ಲರೂ ಇಲ್ಲಿಂದ ಹೊರಡಿರಿ, ಬಾಲಕಿ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ,” ಎಂದರು. ಜನರು ನಕ್ಕು ಅವರನ್ನು ಪರಿಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ, ನಿದ್ದೆಮಾಡುತ್ತಾಳೆ ಅನ್ನಲು ಅವರು ಆತನನ್ನು ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ದೂರ ಹೋಗಿರಿ, ಹುಡುಗಿ ಸತ್ತಿಲ್ಲ. ಅವಳು ನಿದ್ದೆ ಮಾಡುತ್ತಿದ್ದಾಳೆ” ಅಂದನು. ಆದರೆ ಅವರು ಯೇಸುವನ್ನು ಅಪಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಜೆಜುನ್,“ಸಗ್ಳೆ ಜಾನಾ ಭಾಯ್ರ್ ಪಡಾ ತೆ ಚೆಡು ಮರುಕ್‍ ನಾ, ತಿ ನಿಜ್ಲಾ!” ಮಟ್ಲ್ಯಾನ್. ತನ್ನಾ ತೆನಿ ಸಗ್ಳ್ಯಾನಿ ಜೆಜುಕ್ ಹಾಸ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:24
12 ತಿಳಿವುಗಳ ಹೋಲಿಕೆ  

ಆದರೆ ಪೌಲನು ಕೆಳಗೆ ಹೋಗಿ, ಆ ಯುವಕನನ್ನು ತಬ್ಬಿಕೊಂಡು, “ಗಾಬರಿಗೊಳ್ಳಬೇಡಿ, ಅವನ ಜೀವ ಅವನಲ್ಲಿದೆ,” ಎಂದನು.


ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು.


ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


“ನಾನು ನೀತಿವಂತನೂ, ನಿರ್ದೋಷಿಯಾದರೂ ಗೆಳೆಯರ ಗೇಲಿ ಪರಿಹಾಸ್ಯಕ್ಕೆ ಗುರಿಯಾದೆನು; ನಾನು ದೇವರಿಗೆ ಪ್ರಾರ್ಥಿಸಿದೆ; ದೇವರು ನನಗೆ ಉತ್ತರಕೊಟ್ಟರು;


ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು. ಯೇಸು ಅವರನ್ನೆಲ್ಲಾ ಹೊರಗೆ ಹಾಕಿ, ಆ ಹುಡುಗಿಯ ತಂದೆತಾಯಿ ಮತ್ತು ತನ್ನೊಂದಿಗಿದ್ದ ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಹುಡುಗಿಯನ್ನಿಟ್ಟಿದ್ದ ಕೋಣೆಗೆ ಹೋದರು.


ಆಕೆಯು ಸತ್ತಿದ್ದಾಳೆಂದು ತಿಳಿದು ಅಳುತ್ತಿದ್ದವರು ಯೇಸುವನ್ನು ಹಾಸ್ಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು