Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:33 - ಕನ್ನಡ ಸಮಕಾಲಿಕ ಅನುವಾದ

33 ದೆವ್ವ ಬಿಡಿಸಿದ ಮೇಲೆ, ಆ ಮೂಕನು ಮಾತನಾಡಿದನು. ಜನರು ಆಶ್ಚರ್ಯಪಟ್ಟು, “ಇಂಥದ್ದನ್ನು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ದೆವ್ವ ಬಿಡಿಸಿದ ಮೇಲೆ ಮೂಕನಾಗಿದ್ದ ಅವನು ಮಾತನಾಡುವವನಾದನು. ಅದಕ್ಕೆ ಜನರು, “ಇಸ್ರಾಯೇಲಿನಲ್ಲಿ ಇಂಥ ಕಾರ್ಯವನ್ನು ಇದುವರೆಗೂ ಯಾರೂ ನೋಡಲಿಲ್ಲವೆಂದು” ಆಶ್ಚರ್ಯಚಕಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನು ದೆವ್ವಬಿಡಿಸಿದ ಮೇಲೆ ಆ ಮೂಕನು ಮಾತಾಡುವವನಾದನು. ಅದಕ್ಕೆ ಆ ಜನರು - ಇಸ್ರಾಯೇಲ್ ಜನರಲ್ಲಿ ಇಂಥ ಕಾರ್ಯವನ್ನು ಇದುವರೆಗೆ ಯಾರೂ ನೋಡಲಿಲ್ಲವೆಂದು ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೇಸು ಆ ದೆವ್ವಕ್ಕೆ ಅವನನ್ನು ಬಿಟ್ಟುಹೋಗುವಂತೆ ಆಜ್ಞಾಪಿಸಿದನು. ಅವನು ಮಾತನಾಡತೊಡಗಿದನು. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿ, “ಇಸ್ರೇಲಿನಲ್ಲಿ ಇಂಥ ಕಾರ್ಯವನ್ನು ನೋಡಿಯೇ ಇಲ್ಲ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಖರೆ ತ್ಯಾ ಗಿರ್‍ಯಾಕ್ ತ್ಯಾ ಮಾನ್ಸಾತ್ನಾ ಕಾಡಲ್ಲ್ಯಾ ತನ್ನಾ ತಾಬೊಡ್ತೊಬ್ ತೊ ಮುಕ್ಕೊ ಬೊಲುಕ್‍ಲಾಲೊ, ಅನಿ ಸಗ್ಳೆ ಜಾನಾ ಅಜಾಪ್ ಹೊಲ್ಯಾನಿ. ತೆನಿ “ಅಮಿ ಅಸ್ಲೆ ಕಾಯ್ಬಿ ಕನ್ನಾಬಿ ಇಸ್ರಾಯೆಲಾತ್ ಬಗುಕ್ನಾವ್!” ಮನುನ್ ತೆನಿ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:33
12 ತಿಳಿವುಗಳ ಹೋಲಿಕೆ  

ಯೇಸು ಒಂದು ಮೂಕದೆವ್ವವನ್ನು ಹೊರಗೆ ಓಡಿಸುತ್ತಿದ್ದರು. ಆ ದೆವ್ವವು ಹೊರಟುಹೋದ ಮೇಲೆ, ಆ ಮೂಕನು ಮಾತನಾಡಿದನು. ಅದಕ್ಕೆ ಜನರು ಆಶ್ಚರ್ಯಪಟ್ಟರು.


ಆಗ ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯೂ ಹರ್ಷದಿಂದ ಹಾಡುವುದು. ಏಕೆಂದರೆ ಮರುಭೂಮಿಯಲ್ಲಿ ನೀರೂ, ಮರುಭೂಮಿಯಲ್ಲಿ ಒರತೆಗಳೂ ಒಡೆಯುವುವು.


ಯೇಸು ಅವನ ಈ ಮಾತುಗಳನ್ನು ಕೇಳಿದಾಗ, ಆಶ್ಚರ್ಯಪಟ್ಟು ತಿರುಗಿಕೊಂಡು ತಮ್ಮನ್ನು ಹಿಂಬಾಲಿಸುತ್ತಿದ್ದ ಗುಂಪಿಗೆ, “ನಾನು ನಿಮಗೆ ಹೇಳುವುದೇನೆಂದರೆ, ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಸಹ ಕಾಣಲಿಲ್ಲ,” ಎಂದರು.


ನೀವು ಈ ದಿನದವರೆಗೂ ಈಜಿಪ್ಟ್ ದೇಶದಲ್ಲಿಯೂ ಇಸ್ರಾಯೇಲಿನಲ್ಲಿಯೂ ಜನಾಂಗಗಳೊಳಗೂ ಗುರುತುಗಳನ್ನೂ, ಲಕ್ಷಣಗಳನ್ನೂ ಇಟ್ಟಿದ್ದೀರಿ. ಇಂದಿನವರೆಗೂ ನಿಮಗೆ ಹೆಸರನ್ನು ಸ್ಥಿರಪಡಿಸಿಕೊಂಡಿದ್ದೀರಿ.


ಯೆಹೂದ ಪ್ರದೇಶದಲ್ಲಿ ದೇವರು ಸುಪ್ರಸಿದ್ಧರಾಗಿದ್ದಾರೆ. ಇಸ್ರಾಯೇಲಿನಲ್ಲಿ ದೇವರ ಹೆಸರು ಪ್ರಖ್ಯಾತವಾಗಿದೆ.


ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು.


ಕೂಡಲೇ ಅವನು ಎದ್ದು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಆಗ ಎಲ್ಲರು ವಿಸ್ಮಯಗೊಂಡು, “ಇಂಥದ್ದನ್ನು ನಾವು ಹಿಂದೆಂದೂ ಕಂಡಿರಲಿಲ್ಲ!” ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.


ಯೇಸು ಇದನ್ನು ಕೇಳಿ, ಆಶ್ಚರ್ಯಪಟ್ಟು ತಮ್ಮ ಹಿಂದೆ ಬರುತ್ತಿದ್ದವರಿಗೆ, “ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.


ಯೇಸು ಮತ್ತು ಶಿಷ್ಯರು ಹೊರಟು ಹೋಗುತ್ತಿದ್ದಾಗ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುವಿನ ಬಳಿಗೆ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು