Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:9 - ಕನ್ನಡ ಸಮಕಾಲಿಕ ಅನುವಾದ

9 ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೇಸು ಅಲ್ಲಿಂದ ಹೋಗುತ್ತಿರುವಾಗ ಸುಂಕಕ್ಕೆ ಕೂತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೇಸು ಹೋಗುತ್ತಿರುವಾಗ, ಮತ್ತಾಯ ಎಂಬ ವ್ಯಕ್ತಿಯನ್ನು ಕಂಡನು. ಮತ್ತಾಯನು ಸುಂಕದಕಟ್ಟೆಯಲ್ಲಿ ಕುಳಿತಿದ್ದನು. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು” ಅಂದನು. ಆಗ ಮತ್ತಾಯನು ಎದ್ದು ಯೇಸುವನ್ನು ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಜೆಜು ತೊ ಜಾಗೊ ಸೊಡುನ್ ಚಲುನ್ಗೆತ್ ಜಾತಾನಾ, ತೆರ್‍ಗಿ ವಸುಲಿ ಕರುಕ್ ಅಪ್ನಾಚ್ಯಾ ಜಾಗ್ಯಾರ್ ಬಸಲ್ಲ್ಯಾ ಮಾತೆವ್ ಮನ್ತಲ್ಯಾ ತೆರ್‍ಗಿ ವಸುಲಿ ಕರ್‍ತಲ್ಯಾಕ್ ತೆನಿ ಬಗಟ್ಲ್ಯಾನ್, ಜೆಜುನ್ ತೆಕಾ “ಮಾಜ್ಯಾ ವಾಂಗ್ಡಾ ಯೆ” ಮಟ್ಲ್ಯಾನ್. ತನ್ನಾ ಮಾತೆವ್ ಉಟ್ಲೊ ಅನಿ ತೆಚ್ಯಾ ವಾಂಗ್ಡಾ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:9
16 ತಿಳಿವುಗಳ ಹೋಲಿಕೆ  

ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನನು.


ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ.


ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ; ಫಿಲಿಪ್ಪ, ತೋಮ; ಬಾರ್ತೊಲೊಮಾಯ ಮತ್ತಾಯ; ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಸೀಮೋನ ಮತ್ತು ಯಾಕೋಬನ ಮಗ ಯೂದ.


ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಎಂದು ಅನ್ನಿಸಿಕೊಂಡ ಸೀಮೋನ,


ಫಿಲಿಪ್ಪ, ಬಾರ್ತೊಲೊಮಾಯ; ತೋಮ, ಸುಂಕದವನಾದ ಮತ್ತಾಯ; ಅಲ್ಫಾಯನ ಮಗ ಯಾಕೋಬ, ತದ್ದಾಯ;


ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಕಟ್ಟುವುದು ಮುಗಿದರೆ, ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ. ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.


ಆದರೆ ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ,” ಎಂದು ಹೇಳಿದರು.


ಇದಾದ ಮೇಲೆ ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ಅಪಖ್ಯಾತಿಯ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು.


ಅವರಿಗೆ, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುತ್ತೇನೆ,’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು