Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:1 - ಕನ್ನಡ ಸಮಕಾಲಿಕ ಅನುವಾದ

1 ಒಂದು ಪ್ರವಾದನೆ: ಇಸ್ರಾಯೇಲಿಗೆ ಮಲಾಕಿಯನ ಮುಖಾಂತರ ಬಂದ ಯೆಹೋವ ದೇವರ ವಾಕ್ಯ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಇಸ್ರಾಯೇಲರ ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮಲಾಕಿಯನ ಮುಖಾಂತರ ಇಸ್ರಯೇಲ್ ಜನರಿಗೆ ಸರ್ವೇಶ್ವರ ನೀಡಿದ ದೈವೋಕ್ತಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಇಸ್ರಾಯೇಲನ್ನು ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರಿಂದ ಬಂದ ಸಂದೇಶ. ಯೆಹೋವ ದೇವರು ಮಲಾಕಿಯ ಮೂಲಕ ಇಸ್ರೇಲರಿಗೆ ಕೊಟ್ಟ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:1
9 ತಿಳಿವುಗಳ ಹೋಲಿಕೆ  

ಪ್ರವಾದಿಯಾದ ಹಬಕ್ಕೂಕನು ಹೊಂದಿದ ಪ್ರವಾದನೆಯು:


ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ:


ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ,


ಒಂದು ಪ್ರವಾದನೆ: ಹದ್ರಾಕ್ ದೇಶದ ವಿಷಯವಾದ ಯೆಹೋವ ದೇವರ ವಾಕ್ಯ: ಅದು ದಮಸ್ಕದಲ್ಲಿ ತಂಗುವುದು. ಮನುಷ್ಯನ ಕಣ್ಣುಗಳು, ಇಸ್ರಾಯೇಲಿನ ಎಲ್ಲಾ ಗೋತ್ರಗಳು ಯೆಹೋವ ದೇವರ ಮೇಲೆ ಇರುವುವು.


ಏಳನೆಯ ತಿಂಗಳಿನ, ಇಪ್ಪತ್ತೊಂದನೆಯ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಬಂದಿತು:


ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:


ನಿನೆವೆಯ ವಿಷಯವಾದ ಪ್ರವಾದನೆ: ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.


“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’


ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ. ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ, ಏಕೆಂದರೆ ಯೆಹೂದವು ಯೆಹೋವ ದೇವರು ಪ್ರೀತಿಮಾಡಿದ ಪರಿಶುದ್ಧ ಆಲಯವನ್ನು ಅಪವಿತ್ರ ಮಾಡಿ, ಅನ್ಯದೇವತೆಗಳನ್ನು ಆರಾಧಿಸುವ ಮಹಿಳೆಯರನ್ನು ಮದುವೆ ಮಾಡಿಕೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು