ಮಲಾಕಿ 1:11 - ಕನ್ನಡ ಸಮಕಾಲಿಕ ಅನುವಾದ11 ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |