ಮಲಾಕಿ 1:12 - ಕನ್ನಡ ಸಮಕಾಲಿಕ ಅನುವಾದ12 “ಆದರೆ ನೀವು ಯೆಹೋವ ದೇವರ ಮೇಜು ಅಶುದ್ಧ, ‘ಅದರ ಫಲವೂ, ಅದರ ಆಹಾರವೂ ಅಸಹ್ಯ,’ ಎಂದು ಹೇಳಿ ಅದನ್ನು ಅಪವಿತ್ರ ಮಾಡಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀವಾದರೋ, ‘ಸರ್ವೇಶ್ವರಸ್ವಾಮಿಯ ಪೀಠ ಅಶುದ್ಧ; ಅದರ ಮೇಲಿನ ಆಹಾರಪದಾರ್ಥಗಳು ಅಸಹ್ಯ’ ಎಂದು ಹೇಳಿ ನನ್ನ ನಾಮಕ್ಕೆ ಅಪಕೀರ್ತಿ ತರುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀವೋ - ಯೆಹೋವನ ಮೇಜು ಅಶುದ್ಧ, ಅದರ ಮೇಲಣ ಎಡೆಯು ತುಚ್ಫ ಅಂದುಕೊಳ್ಳುವದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಆದರೆ ನೀವು ನನ್ನ ನಾಮವನ್ನು ಘನಪಡಿಸುವದಿಲ್ಲ. ನನ್ನ ಮೇಜು ಅಶುದ್ಧವಾದದ್ದೆಂದು ನೀವು ಹೇಳುತ್ತೀರಿ. ಅಧ್ಯಾಯವನ್ನು ನೋಡಿ |