Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:14 - ಕನ್ನಡ ಸಮಕಾಲಿಕ ಅನುವಾದ

14 “ಆದರೆ ತನ್ನ ಮಂದೆಯಲ್ಲಿ ದೋಷವಿಲ್ಲದ ಗಂಡು ಪಶು ಇರಲಾಗಿ ಅದನ್ನು ಅರ್ಪಿಸಲು ಪ್ರಮಾಣಮಾಡಿ, ಯೆಹೋವ ದೇವರಿಗೆ ದೋಷವುಳ್ಳದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ, ಏಕೆಂದರೆ ನಾನು ಮಹಾ ಅರಸನು, ನನ್ನ ಹೆಸರು ಇತರ ಜನಾಂಗಗಳಲ್ಲಿ ಭಯಭಕ್ತಿಯುಳ್ಳದ್ದಾಗಿರಬೇಕು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿ ಗಂಡುಪಶುವಿದ್ದರೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಗಲಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಈಡಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:14
39 ತಿಳಿವುಗಳ ಹೋಲಿಕೆ  

ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.


ಇದಲ್ಲದೆ, ಕುರುಡಾದ ಪಶುಗಳನ್ನು ಬಲಿಗಾಗಿ ಅರ್ಪಿಸಿದರೆ, ಅದು ದೋಷವಲ್ಲವೋ? ಕುಂಟಾದ ಮತ್ತು ರೋಗವುಳ್ಳ ಪಶುಗಳನ್ನು ಅರ್ಪಿಸಿದರೆ, ಅದು ಕೆಟ್ಟದ್ದಲ್ಲವೋ? “ಅದನ್ನು ನಿನ್ನ ರಾಜ್ಯಪಾಲನಿಗೆ ಅರ್ಪಿಸು, ಅವನು ನಿನ್ನನ್ನು ಮೆಚ್ಚುವನೋ? ನಿಮ್ಮನ್ನು ಸ್ವೀಕಾರ ಮಾಡುವನೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು, ಅವನನ್ನು ಕಠಿಣವಾಗಿ ಹೊಡಿಸಿ ಅವಿಶ್ವಾಸಿಗಳಿಗೆ ಆಗ ಸಿಕ್ಕುವ ಪಾಲನ್ನು ಅವನಿಗೆ ನೇಮಿಸುವನು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.


ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.


ದೇವರು ಅಧಿಕಾರಿಗಳ ಗರ್ವವನ್ನು ಮುರಿಯುತ್ತಾರೆ. ಭೂಲೋಕದ ಅರಸರು ದೇವರಿಗೆ ಭಯಪಡುತ್ತಾರೆ.


ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ.


ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.


ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”


ರಾಜಾಧಿರಾಜನೂ ಕರ್ತರ ಕರ್ತನೂ ಭಾಗ್ಯವಂತರಾದ ಏಕಾಧಿಪತಿಯು ತಮ್ಮ ಸಮಯಗಳಲ್ಲೆ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವರು.


ನಾನು ನನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥಿಸಿ, ಅರಿಕೆಮಾಡಿದೆನು: “ಕರ್ತನೇ, ಮಹೋನ್ನತ ಮತ್ತು ಅದ್ಭುತ ದೇವರೇ, ನಿಮ್ಮನ್ನು ಪ್ರೀತಿಮಾಡಿ, ನಿಮ್ಮ ಆಜ್ಞೆಗಳನ್ನು ಕೈಗೊಂಡು ನಡೆಯುವವರಿಗೆ ಒಡಂಬಡಿಕೆಯ ಪ್ರೀತಿಯನ್ನೂ ಇಟ್ಟು ನೆರವೇರಿಸುವವರೇ,


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


“ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ.


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನಿಮ್ಮ ದೇವರಾದ ಯೆಹೋವ ದೇವರೆಂಬ ಈ ಘನವುಳ್ಳ ಹೆಸರಿಗೆ ನೀವು ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನಿಯಮದ ಮಾತುಗಳನ್ನು ಅಲಕ್ಷಿಸಿ, ತಪ್ಪು ದಾರಿ ಹಿಡಿದರೆ,


ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ, ನನ್ನ ಗತಿಯೇನು? ನಾನು ಅವನಿಗೆ ಮೋಸಮಾಡುವವನಾಗಿ ಕಂಡು ಬಂದು, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು,” ಎಂದನು.


ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹವನ್ನು ಅಭಿಷೇಕಿಸಿದ್ದಾಳೆ.


ಅವನನ್ನು ಕ್ರೂರವಾಗಿ ಹಿಂಸಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.


ಭೂಮಿಯ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಪಾದಪೀಠವು. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ಮಹಾರಾಜನ ಪಟ್ಟಣವಾಗಿದೆ.


ಇದರಿಂದ ಶಾಪವು ನಿಮಗಾಯಿತು, ಏಕೆಂದರೆ ನೀವು, ಈ ಸಮಸ್ತ ಜನಾಂಗವೇ ನನ್ನಲ್ಲಿ ಕಳ್ಳತನ ಮಾಡುತ್ತಿದ್ದಿರಿ.


ಯೆಹೋವ ದೇವರು ಮಹಾ ದೇವರು, ಎಲ್ಲಾ ದೇವರುಗಳ ಮೇಲೆ ಮಹಾರಾಜರೂ ಆಗಿದ್ದಾರೆ.


ದೇವರೇ, ನಿಮ್ಮ ಪರಿಶುದ್ಧ ಸ್ಥಳದಲ್ಲಿ ನೀವು ಅತಿಶಯವಾಗಿದ್ದೀರಿ. ಇಸ್ರಾಯೇಲರ ದೇವರೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುವರು. ದೇವರಿಗೆ ಸ್ತುತಿಯಾಗಲಿ.


ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ.


ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.


“ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.


ಮೋವಾಬು ಸೂರೆಯಾಯಿತು. ಅದರ ಪಟ್ಟಣಗಳು ಏರಿ ಹೋದವು, ಅದರ ಶ್ರೇಷ್ಠ ಯೌವನಸ್ಥರು ಹತರಾಗುವುದಕ್ಕೆ ಹೋಗಿದ್ದಾರೆ,” ಎಂದು ಸರ್ವಶಕ್ತ ಯೆಹೋವ ಎಂಬ ಹೆಸರುಳ್ಳ ರಾಜಾಧಿರಾಜರ ನುಡಿ.


ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು.


“ಈಗ ಯಾಜಕರೇ, ಈ ಎಚ್ಚರಿಕೆ ನಿಮಗಾಗಿ ಇದೆ.


ಜನರನ್ನು ನಮ್ಮ ಕೆಳಗೆ ತಂದಿದ್ದಾರೆ. ಜನಾಂಗಗಳನ್ನು ನಮಗೆ ಅಧೀನಮಾಡಿದ್ದಾರೆ.


ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ.


ಏಕೆಂದರೆ ಯೆಹೋವ ದೇವರು ಚೀಯೋನನ್ನು ಮರಳಿ ಕಟ್ಟುವರು; ಅವರು ತಮ್ಮ ಮಹಿಮೆಯಲ್ಲಿ ಕಾಣಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು