ಮಲಾಕಿ 1:6 - ಕನ್ನಡ ಸಮಕಾಲಿಕ ಅನುವಾದ6 “ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.