ಮಲಾಕಿ 1:7 - ಕನ್ನಡ ಸಮಕಾಲಿಕ ಅನುವಾದ7 “ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸುತ್ತೀರಿ. “ ‘ಯಾವುದರಲ್ಲಿ ನಿಮ್ಮನ್ನು ನಾವು ಅಪವಿತ್ರ ಮಾಡಿದ್ದೇವೆ?’ ಎಂದು ಕೇಳುತ್ತೀರಿ.” ಯೆಹೋವ ದೇವರ ಮೇಜು ಹೀನವಾದದ್ದೆಂದು ನೀವು ಹೇಳುವುದರಿಂದಲೇ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ನನ್ನ ಬಲಿಪೀಠದ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸಿ ನನ್ನನ್ನು ಅವಮಾನಗೊಳಿಸಿದ್ದೀರಿ;” “ಯಾವ ವಿಷಯದಲ್ಲಿ ನಿಮಗೆ ಅಗೌರವ ತಂದಿದ್ದೇವೆ ಎನ್ನುತ್ತೀರೋ? ‘ಸರ್ವೇಶ್ವರಸ್ವಾಮಿಯ ವೇದಿಕೆಗೆ ಘನತೆ ಏನಿದೆ?’ ಎಂದು ಹೇಳಿಕೊಳ್ಳುವುದರಲ್ಲಿದೆ ಆ ಅಗೌರವ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. ಯಾವ ವಿಷಯದಲ್ಲಿ ನಿನ್ನನ್ನು ಅಶುದ್ಧಗೊಳಿಸಿದ್ದೇವೆ ಅನ್ನುತ್ತೀರೋ?ಯೆಹೋವನ ಮೇಜಿಗೆ ಘನತೆಯೇನಿದೆ ಎಂದು ನೀವು ಅಂದುಕೊಳ್ಳುವದರಲ್ಲಿಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ನನ್ನ ಯಜ್ಞವೇದಿಕೆಗೆ ನೀವು ಅಶುದ್ಧ ರೊಟ್ಟಿಗಳನ್ನು ಅರ್ಪಿಸುತ್ತೀರಿ” ಎಂದು ಯೆಹೋವನು ಹೇಳುತ್ತಾನೆ. “ಯಾವ ವಿಷಯದಲ್ಲಿ ಅದು ಅಶುದ್ಧವಾಯಿತು?” ಎಂದು ನೀವು ಕೇಳುತ್ತೀರಿ. ಅದಕ್ಕೆ ಯೆಹೋವನು, “ನನ್ನ ಯಜ್ಞವೇದಿಕೆಯನ್ನು ನೀವು ಗೌರವಿಸುವದಿಲ್ಲ. ಅಧ್ಯಾಯವನ್ನು ನೋಡಿ |