Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:8 - ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ, ಕುರುಡಾದ ಪಶುಗಳನ್ನು ಬಲಿಗಾಗಿ ಅರ್ಪಿಸಿದರೆ, ಅದು ದೋಷವಲ್ಲವೋ? ಕುಂಟಾದ ಮತ್ತು ರೋಗವುಳ್ಳ ಪಶುಗಳನ್ನು ಅರ್ಪಿಸಿದರೆ, ಅದು ಕೆಟ್ಟದ್ದಲ್ಲವೋ? “ಅದನ್ನು ನಿನ್ನ ರಾಜ್ಯಪಾಲನಿಗೆ ಅರ್ಪಿಸು, ಅವನು ನಿನ್ನನ್ನು ಮೆಚ್ಚುವನೋ? ನಿಮ್ಮನ್ನು ಸ್ವೀಕಾರ ಮಾಡುವನೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕುರುಡಾದ ಪಶುಗಳನ್ನು ಬಲಿಯರ್ಪಿಸುವುದು ತಪ್ಪಲ್ಲವೆ? ಊನವಾದ ರೋಗದ ಪಶುಗಳನ್ನು ಅರ್ಪಿಸುವುದು ದೋಷವಲ್ಲವೇ? ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ಇಂಥದ್ದನ್ನು ನಿಮ್ಮ ರಾಜಪಾಲನಿಗೆ ಕಾಣಿಕೆಯಾಗಿ ಕೊಟ್ಟರೆ ಅವನು ನಿಮ್ಮನ್ನು ಮೆಚ್ಚುವನೋ ಅಥವಾ ನಿಮ್ಮ ಕೋರಿಕೆಯನ್ನು ನೆರವೇರಿಸುವನೋ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ ರೋಗದ ಪಶುವನ್ನೂ ಅರ್ಪಿಸುವದು ದೋಷವಲ್ಲವೆಂದು ನಂಬುತ್ತೀರೋ? ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಂಥದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸುವನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:8
10 ತಿಳಿವುಗಳ ಹೋಲಿಕೆ  

ಅದರಲ್ಲಿ ಏನಾದರೂ ಊನವಿದ್ದರೆ ಅಂದರೆ, ಅದು ಕುಂಟಾಗಲಿ, ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾಗಿದ್ದರೆ, ಅದನ್ನು ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು.


ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.


ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”


ನಿಮ್ಮ ಯಜ್ಞಾರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿಕೊಂಡು, ನಿಮ್ಮ ದಹನಬಲಿಗಳನ್ನು ಸ್ವೀಕರಿಸಲಿ.


ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:


“ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸುತ್ತೀರಿ. “ ‘ಯಾವುದರಲ್ಲಿ ನಿಮ್ಮನ್ನು ನಾವು ಅಪವಿತ್ರ ಮಾಡಿದ್ದೇವೆ?’ ಎಂದು ಕೇಳುತ್ತೀರಿ.” ಯೆಹೋವ ದೇವರ ಮೇಜು ಹೀನವಾದದ್ದೆಂದು ನೀವು ಹೇಳುವುದರಿಂದಲೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು