Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:9 - ಕನ್ನಡ ಸಮಕಾಲಿಕ ಅನುವಾದ

9 “ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ. ನಿಮ್ಮ ಕೈಗಳಿಂದ ಅಂಥ ಅರ್ಪಣೆಯನ್ನು ಅವರು ಸ್ವೀಕರಿಸುವರೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದುದರಿಂದ ಯಾಜಕರೇ, ದೇವರ ದಯೆ ನಿಮಗೆ ದೊರಕುವಂತೆ ಅವರನ್ನು ಒಲಿಸಿಕೊಳ್ಳಿರಿ. ಇಂಥ ಕಾಣಿಕೆ ನಿಮ್ಮ ಕೈಯಲ್ಲಿದ್ದರೆ ಯಾರಿಗಾದರು ದೇವರು ನಿಮ್ಮ ಕೋರಿಕೆಯನ್ನು ಈಡೇರಿಸುವುದುಂಟೋ? ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನಗೆ ಮೆಚ್ಚುವನೋ? ಪ್ರಸನ್ನನಾಗುವನೋ? ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಒಲಿಸಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ? ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಯಾಜಕರೇ, ಯೆಹೋವನು ನಮಗೆ ಶುಭವನ್ನು ಉಂಟುಮಾಡುವಂತೆ ಆತನನ್ನು ಕೇಳಿಕೊಳ್ಳಿರಿ. ಆದರೆ ಆತನು ನಿಮಗೆ ಕಿವಿಗೊಡುವುದಿಲ್ಲ. ನಿಮ್ಮ ತಪ್ಪು ದೋಷಗಳೇ ಅದಕ್ಕೆ ಕಾರಣ.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:9
15 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಯೆಹೋವ ದೇವರ ವಾಕ್ಯ ಅವರಲ್ಲಿ ನೆಲಸಿದ್ದರೆ, ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ, ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸೇನಾಧೀಶ್ವರ ಯೆಹೋವ ದೇವರಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.


ಅದಕ್ಕೆ ಮೋಶೆ, ತನ್ನ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನೆಂದರೆ, “ಯೆಹೋವ ದೇವರೇ, ನೀವು ಮಹಾಶಕ್ತಿಯಿಂದಲೂ, ಬಲವುಳ್ಳ ಕೈಯಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರ ಮೇಲೆ ಏಕೆ ನಿಮ್ಮ ಕೋಪವು ಉರಿಯುವುದು?


ದೇವರಲ್ಲಿ ಪಕ್ಷಪಾತವಿಲ್ಲ.


ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.


ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.


ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?”


ಎದ್ದೇಳು, ರಾತ್ರಿಯಲ್ಲಿ ಕೂಗು. ನಿನ್ನ ಹೃದಯವನ್ನು ಕರ್ತದೇವರ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ ನೀರಿನಂತೆ ಹೊಯ್ದುಬಿಡಿರಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಏಕೆಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.


ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”


ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ, ನಾನು ಅವುಗಳನ್ನು ಅಂಗೀಕರಿಸುವುದಿಲ್ಲ. ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ ನಾನು ಲಕ್ಷಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು