9 “ಆದ್ದರಿಂದ ನೀವು ನನ್ನ ಮಾರ್ಗಗಳನ್ನು ಕೈಗೊಳ್ಳದೆ, ನನ್ನ ನಿಯಮವನ್ನು ಬೋಧಿಸುವಾಗ ಮುಖದಾಕ್ಷಿಣ್ಯ ಮಾಡಿದ ಪ್ರಕಾರವೇ, ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆಯಾದವರನ್ನಾಗಿಯೂ, ನೀಚರನ್ನಾಗಿಯೂ ಮಾಡುವೆನು.”
9 “ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”
9 ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮಶಾಸ್ತ್ರೋಪದೇಶದಲ್ಲಿ ಮುಖದಾಕ್ಷಿಣ್ಯವನ್ನು ತೋರಿಸಿದ್ದರಿಂದ ನಾನಂತು ನಿಮ್ಮನ್ನು ಎಲ್ಲಾ ಜನರ ಮುಂದೆ ಮಾನಗೆಟ್ಟವರನ್ನಾಗಿಯೂ ಕೀಳಾದವರನ್ನಾಗಿಯೂ ಮಾಡುವೆನು.
9 “ನಾನು ಹೇಳಿರುವ ಪ್ರಕಾರ ನೀವು ಜೀವಿಸುತ್ತಿಲ್ಲ. ನೀವು ನನ್ನ ಉಪದೇಶವನ್ನು ಜನರಿಗೆ ತಿಳಿಸುವಾಗ ಮುಖದಾಕ್ಷಿಣ್ಯ ಮಾಡುತ್ತೀರಿ. ಈ ಕಾರಣದಿಂದಾಗಿ ನಿಮ್ಮನ್ನು ಗಣನೆಗೆ ಬಾರದವರಂತೆಯೂ ಜನರು ನಿಮ್ಮನ್ನು ಸನ್ಮಾನಿಸದಂತೆಯೂ ಮಾಡುವೆನು.”
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.
ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು,” ಎಂದು ಹೇಳಿದೆ.
“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು.
ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರನ್ನು ಎಡವುವಂತೆ ಮಾಡಿದ್ದೀರಿ. ಲೇವಿಯರೊಂದಿಗಿನ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.
ನಿಮ್ಮ ವಸ್ತ್ರಗಳನ್ನು ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ. ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.
ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.
ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.