ಮಲಾಕಿ 3:1 - ಕನ್ನಡ ಸಮಕಾಲಿಕ ಅನುವಾದ1 “ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ. ಅಧ್ಯಾಯವನ್ನು ನೋಡಿ |