ಮಲಾಕಿ 3:10 - ಕನ್ನಡ ಸಮಕಾಲಿಕ ಅನುವಾದ10 ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನನ್ನ ಆಲಯವು ಆಹಾರಶೂನ್ಯವಾಗದಂತೆ ನೀವು ದಶಮಾಂಶ ಯಾವತ್ತನ್ನೂ ಬಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳ ಹಿಡಿಯಲಾಗದಷ್ಟು ಸುವರವನ್ನು ಸುರಿಯುವೆನೋ ಇಲ್ಲವೋ ನನ್ನನ್ನು ಹೀಗೆ ಪರೀಕ್ಷಿಸಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು. ಅಧ್ಯಾಯವನ್ನು ನೋಡಿ |
ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.