Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:18 - ಕನ್ನಡ ಸಮಕಾಲಿಕ ಅನುವಾದ

18 ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:18
24 ತಿಳಿವುಗಳ ಹೋಲಿಕೆ  

“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.


ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.


ನಾನು ಅವರನ್ನು ಕಿತ್ತು ಹಾಕಿದ ಮೇಲೆ, ನಾನು ಹಿಂದಿರುಗಿ ಅವರನ್ನು ಕರುಣಿಸುವೆನು. ತಮ್ಮ ತಮ್ಮ ಸೊತ್ತಿಗೂ, ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.


ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು,


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.


ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.


ಎದೋಮ್ಯರು, “ನಾವು ಬಡಕಲಾದೆವು, ಆದರೆ ನಾವು ಮತ್ತೆ ಹಾಳಾದ ಸ್ಥಳಗಳನ್ನು ಕಟ್ಟುವೆವು,” ಎಂದು ಹೇಳಬಹುದು. ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು. ಜನರು ಅವರನ್ನು ದುಷ್ಟತನದ ನಾಡೆಂದೂ, ಯೆಹೋವ ದೇವರು ಎಂದೆಂದಿಗೂ ಸಿಟ್ಟು ಮಾಡುವ ಜನವೆಂದೂ ಕರೆಯುವರು.


ದೇವಪುತ್ರನ ಸುವಾರ್ತೆಯನ್ನು ಸಾರುವುದರಿಂದ ದೇವರನ್ನೇ ನನ್ನ ಆತ್ಮದಲ್ಲಿ ಸೇವೆ ಮಾಡುವವನಾಗಿದ್ದೇನೆ. ಇದಕ್ಕೆ ದೇವರೇ ನನ್ನ ಸಾಕ್ಷಿ.


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?


“ಆದರೆ ನೀವೆಲ್ಲರೂ ಬಂದು ಮತ್ತೆ ವಾದ ಮಾಡಲು ಪ್ರಯತ್ನಿಸಿರಿ! ನಿಮ್ಮಲ್ಲಿ ನಾನು ಒಬ್ಬ ಜ್ಞಾನಿಯನ್ನು ಸಹ ಕಂಡುಕೊಳ್ಳಲಿಲ್ಲ.


ಕರುಣೆ ತೋರಿಸಿರಿ, ಅನ್ಯಾಯವಾಗದಿರಲಿ; ಪುನಃ ಯೋಚಿಸಿರಿ, ನನ್ನ ಪ್ರಾಮಾಣಿಕತೆಯು ಪ್ರಶ್ನಿಸಲಾಗಿದೆ.


ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.


ಆದರೆ ಯೆಹೋವ ದೇವರು ಈಜಿಪ್ಟಿನವರಿಗೂ, ಇಸ್ರಾಯೇಲರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳುಕೊಳ್ಳುವಂತೆ, ಇಸ್ರಾಯೇಲಿನವರ ವಿರುದ್ಧ ಇಲ್ಲವೆ ಪ್ರಾಣಿಗಳ ವಿರುದ್ಧ ಒಂದು ನಾಯಿ ಸಹ ಬೊಗಳುವುದಿಲ್ಲ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು