Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:7 - ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಅನುಸರಿಸಲಿಲ್ಲ. ನನ್ನ ಬಳಿಗೆ ತಿರುಗಿಕೊಳ್ಳಿರಿ. ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ಯಾವುದರಲ್ಲಿ ತಿರುಗಿಕೊಳ್ಳೋಣ?’ ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ಪೂರ್ವಜರ ಕಾಲದಿಂದಲೂ ನನ್ನ ವಿಧಿಗಳನ್ನು ಅನುಸರಿಸದೆ, ಅಡ್ಡದಾರಿ ಹಿಡಿದಿದ್ದೀರಿ. ಈಗ ಮರಳಿ ನನಗೆ ಅಭಿಮುಖರಾಗಿರಿ. ನಾನು ನಿಮಗೆ ಅಭಿಮುಖನಾಗುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ‘ನಾವು ನಿಮಗೆ ಅಭಿಮುಖರಾಗಲು ಏನು ಮಾಡಬೇಕು?’ ಎಂದು ಕೇಳುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ಪಿತೃಗಳ ಕಾಲದಿಂದಲೂ ನೀವು ನನ್ನ ವಿಧಿಗಳಿಗೆ ಓರೆಯಾದಿರಿ, ಅವುಗಳನ್ನು ಅನುಸರಿಸಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ. ಯಾವ ವಿಷಯದಲ್ಲಿ ತಿರುಗೋಣವೆನ್ನುತ್ತೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಿಮ್ಮ ಪೂರ್ವಿಕರು ನನ್ನನ್ನು ಅನುಸರಿಸುವದನ್ನು ನಿಲ್ಲಿಸಿಬಿಟ್ಟಿದ್ದರು. ನೀವು ಹಿಂತಿರುಗಿ ನನ್ನ ಬಳಿಗೆ ಬಂದರೆ ನಾನು ನಿಮ್ಮ ಬಳಿಗೆ ಬರುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ. “ನಾವು ಹೇಗೆ ಹಿಂತಿರುಗಿ ಬರಬಹುದು?” ಎಂದು ನೀವು ಕೇಳುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:7
38 ತಿಳಿವುಗಳ ಹೋಲಿಕೆ  

ಆದ್ದರಿಂದ ನೀನು ಅವರಿಗೆ ಹೇಳತಕ್ಕದ್ದೇನೆಂದರೆ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ಬಳಿಗೆ ತಿರುಗಿಕೊಳ್ಳಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆಗ, ‘ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಆದರೆ ಇಸ್ರಾಯೇಲರ ಕುರಿತಾಗಿ, “ನನಗೆ ಅವಿಧೇಯರೂ ಎದುರುಮಾತಾಡುವವರೂ ಆಗಿರುವ ಜನರಿಗೆ, ದಿನವೆಲ್ಲಾ ನಾನು ಕೈಚಾಚಿ ಕರೆದೆನು,” ಎಂದು ಹೇಳುತ್ತಾನೆ.


ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.


ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.


ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು.


ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.


ಅವನು ಹಂದಿಗಳು ತಿನ್ನುತ್ತಿದ್ದ ಸಿಪ್ಪೆಗಳಿಂದಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಕ್ಕೆ ಆಶೆಪಟ್ಟನು, ಆದರೆ ಅದನ್ನು ಸಹ ಅವನಿಗೆ ಯಾರೂ ಕೊಡಲಿಲ್ಲ.


“ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಸುಣ್ಣ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ. ಆದರೆ ಒಳಗೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರುತ್ತವೆ.


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.


“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.


“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.


“ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.


ಒಳ್ಳೆಯದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿಬೀಳುವ ಜನರಿಗೆ ದಿನವೆಲ್ಲಾ ನಾನು ಕೈಚಾಚಿ ಕರೆದೆನು.


“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


“ನೀವು ನನಗೆ ವಿರೋಧವಾಗಿ ಅಹಂಕಾರದಿಂದ ಮಾತುಗಳನ್ನಾಡಿದಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೂ ನೀವು, ‘ನಿನಗೆ ವಿರೋಧವಾಗಿ ನಾವು ಏನು ಮಾತಾಡಿದ್ದೇವೆ?’ ಎನ್ನುತ್ತೀರಿ.”


ಆದರೂ ಅವರು ನನ್ನ ಮಾತಿಗೆ ಕಿವಿಗೊಡದೆ, ತಮ್ಮನ್ನು ಕಠಿಣ ಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.’


ಒಮ್ಮೆ ನಾನು ನಿಯಮವಿಲ್ಲದೆ ಜೀವಿಸುತ್ತಿದ್ದೆನು. ಆದರೆ ಯಾವಾಗ ಆಜ್ಞೆಯು ಬಂದಿತೋ ಆಗ ಪಾಪವು ಜೀವಂತವಾಯಿತು, ನಾನು ಸತ್ತವನಾದೆನು.


ನಿಮ್ಮ ಪಿತೃಗಳು ಈಜಿಪ್ಟ್ ದೇಶವನ್ನು ಬಿಟ್ಟುಹೋದ ದಿನದಿಂದ ಇಂದಿನವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ಪ್ರತಿದಿನವೂ ನಿಮ್ಮ ಬಳಿಗೆ ಕಳುಹಿಸುತ್ತಾ ಬಂದೆನು.


‘ನಿಮ್ಮ ಪಿತೃಗಳು ನನ್ನನ್ನು ಬಿಟ್ಟುಬಿಟ್ಟದ್ದರಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಅವರು ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳನ್ನು ಆರಾಧಿಸಿ, ನನ್ನನ್ನು ತೊರೆದುಬಿಟ್ಟು, ನನ್ನ ನಿಯಮವನ್ನು ಕೈಗೊಳ್ಳಲಿಲ್ಲ.


ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ. ಏಕೆಂದರೆ ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.


ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು