ಮಲಾಕಿ 4:3 - ಕನ್ನಡ ಸಮಕಾಲಿಕ ಅನುವಾದ3 ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದುಷ್ಟರನ್ನು ತುಳಿದುಬಿಡುವಿರಿ; ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ನೀವು ದುಷ್ಟಜನರ ಮೇಲೆ ನಡೆದುಕೊಂಡು ಹೋಗುವಿರಿ; ಅವರು ನಿಮ್ಮ ಕಾಲುಗಳ ಕೆಳಗೆ ಬೂದಿಯಂತಿರುವರು. ನ್ಯಾಯತೀರ್ಪಿನ ಸಮಯದಲ್ಲಿ ನಾನು ಹಾಗೆ ಮಾಡುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |