Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:21 - ಕನ್ನಡ ಸಮಕಾಲಿಕ ಅನುವಾದ

21 ಅವರು ಕಪೆರ್ನೌಮಿಗೆ ಹೋದರು, ಕೂಡಲೇ ಸಬ್ಬತ್ ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಬಳಿಕ ಅವರೆಲ್ಲರೂ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್‍ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಸೇರಿದರು. ಕೂಡಲೆ ಸಬ್ಬತ್‍ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು ಮತ್ತು ಆತನ ಶಿಷ್ಯರು ಕಪೆರ್ನೌಮಿಗೆ ಹೋದರು. ಸಬ್ಬತ್‌ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜು ಅನಿ ತೆಚಿ ಶಿಸಾ ಕಪರ್‍ನವ್ ಮನ್ತಲ್ಯಾ ಗಾವಾಕ್ ಗೆಲೆ. ಥೈ ಸಬ್ಬತಾಚ್ಯಾ ದಿಸಿ, ಜೆಜು ಎಕ್ ಸಿನಾಗೊಗಾತ್ ಗೆಲೊ, ಅನಿ ಲೊಕಾಕ್ನಿ ದೆವಾಚ್ಯಾ ವಿಶಯಾತ್ ಶಿಕ್ವುಕ್‍ಲಾಲೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:21
18 ತಿಳಿವುಗಳ ಹೋಲಿಕೆ  

ಸಬ್ಬತ್ ದಿನ ಬಂದಾಗ, ಯೇಸು ಸಭಾಮಂದಿರದಲ್ಲಿ ಬೋಧಿಸಲಾರಂಭಿಸಿದರು. ಅದನ್ನು ಕೇಳಿದ ಅನೇಕರು ವಿಸ್ಮಯಗೊಂಡು, “ಈತನು ಇವೆಲ್ಲವನ್ನು ಎಲ್ಲಿಂದ ಪಡೆದಿದ್ದಾನೆ? ಈತನ ಕೈಗಳಿಂದ ಇಂಥ ಅದ್ಭುತಕಾರ್ಯಗಳನ್ನು ಮಾಡುವ ಜ್ಞಾನವು ಈತನಿಗೆ ಎಲ್ಲಿಂದ ಬಂತು?


ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ಪೌಲನು ತನ್ನ ವಾಡಿಕೆಯಂತೆ ಮೂರು ಸಬ್ಬತ್ ದಿನಗಳಂದು ಅವರ ಬಳಿ ಹೋಗಿ, ಅವರಲ್ಲಿ ಪವಿತ್ರ ವೇದಗಳ ಬಗ್ಗೆ ವಾದಿಸಿ,


ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು.


ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.


ಯೇಸು ಸಬ್ಬತ್ ದಿನದಲ್ಲಿ ಒಂದು ಸಭಾಮಂದಿರದೊಳಗೆ ಬೋಧಿಸುತ್ತಾ ಇದ್ದರು,


ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ.


ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು.


ಯೇಸು ಅಲ್ಲಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಜನರು ತಿರುಗಿ ಅವರ ಬಳಿಗೆ ಬರಲು, ಯೇಸು ತಮ್ಮ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದರು.


ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂದಿರುಗಿದಾಗ, ಅವರು ಮನೆಗೆ ಬಂದಿದ್ದಾರೆಂಬ ವಾರ್ತೆಯು ಜನರಲ್ಲಿ ಹಬ್ಬಿತು.


ಕೂಡಲೇ ಯೇಸು ಅವರನ್ನು ಕರೆಯಲು, ಅವರು ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.


ಅವರು ಸಭಾಮಂದಿರವನ್ನು ಬಿಟ್ಟ ಕೂಡಲೇ, ಯಾಕೋಬ ಯೋಹಾನರೊಡನೆ ಸೀಮೋನ ಅಂದ್ರೆಯರ ಮನೆಗೆ ಹೋದರು.


ಇಡೀ ಊರಿನವರು ಕೂಡಿ ಆ ಮನೆಯ ಬಾಗಿಲಿನ ಬಳಿ ಬಂದರು.


ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದರು. ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು.


ಯೇಸು ಅವರಿಗೆ, “ ‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ!’ ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಹೇಳಿ, ‘ಕಪೆರ್ನೌಮಿನಲ್ಲಿ ಎಂತೆಂಥ ಕಾರ್ಯಗಳು ನಡೆಯಿತೆಂದು ನಾವು ಕೇಳಿದೆವು. ಅದನ್ನು ಇಲ್ಲಿ ನಿನ್ನ ಸ್ವಂತ ಊರಿನಲ್ಲಿಯೂ ಮಾಡು’ ಎಂದು ನನಗೆ ಹೇಳುವಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು