Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:27 - ಕನ್ನಡ ಸಮಕಾಲಿಕ ಅನುವಾದ

27 ಜನರೆಲ್ಲರು ಇದನ್ನು ಕಂಡು ವಿಸ್ಮಯಗೊಂಡು, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ಅಶುದ್ಧಾತ್ಮಗಳಿಗೆ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅದಕ್ಕೆ ಎಲ್ಲರು ಬೆರಗಾಗಿ - ಇದೇನಿರಬಹುದು? ಇದು ಹೊಸ ಉಪದೇಶ. ಈತನು ಅಧಿಕಾರದಿಂದ ದೆವ್ವಗಳಿಗೂ ಅಪ್ಪಣೆಕೊಡುತ್ತಾನೆ; ಅವು ಆತನ ಮಾತನ್ನು ಕೇಳುತ್ತವೆ ಎಂದು ತಮ್ಮ ತಮ್ಮೊಳಗೆ ವಿಚಾರಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಜನರೆಲ್ಲರೂ ದಿಗ್ಭ್ರಮೆಗೊಂಡು, “ಇದೇನು? ಹೊಸದೊಂದನ್ನು ಈತನು ಅಧಿಕಾರದಿಂದ ಉಪದೇಶಿಸುತ್ತಿದ್ದಾನೆ! ಈತನ ಆಜ್ಞೆಗೆ ದೆವ್ವಗಳೂ ವಿಧೇಯವಾಗುತ್ತಿವೆ” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಸಗ್ಳಿ ಲೊಕಾ ಹೆ ಬಗುನ್ ಅಜಾಪ್ ಹೊಲಿ, ಅನಿ " ಹೆ ಕಾಯ್? ಹ್ಯೊ ಮಾನುಸ್ ಅದಿಕಾರ್‍ಯಾನ್ ಭರಲ್ಲ್ಯಾ ನ್ಹವ್ಯಾಚ್ ರಿತಿನ್ ಶಿಕ್ವುತಾ! ಅನಿ ಗಿರೆ ಸೈತ್, ತೆನಿ ಸಾಂಗಟಲ್ಲೆ ಸಗ್ಳೆ ಆಯಿಕ್ತ್ಯಾತ್. ಮನುನ್ ಎಕಾಮೆಕಾಕ್ನಿ ಬೊಲುಕ್‍ಲಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:27
15 ತಿಳಿವುಗಳ ಹೋಲಿಕೆ  

ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,


ಜನರು ಅತ್ಯಂತ ಆಶ್ಚರ್ಯಪಟ್ಟು, “ಯೇಸು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ. ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರೆ,” ಎಂದುಕೊಳ್ಳುತ್ತಿದ್ದರು.


ಮೂಕರು ಮಾತನಾಡುವುದನ್ನೂ ಊನವಾದವರು ಸ್ವಸ್ಥರಾಗಿರುವುದನ್ನೂ ಕುಂಟರು ನಡೆದಾಡುವುದನ್ನೂ ಕುರುಡರು ಕಾಣುವುದನ್ನೂ ಜನಸಮೂಹದವರು ಕಂಡು ಆಶ್ಚರ್ಯಪಟ್ಟರು. ಅವರು ಇಸ್ರಾಯೇಲಿನ ದೇವರನ್ನು ಕೊಂಡಾಡಿದರು.


ದೆವ್ವ ಬಿಡಿಸಿದ ಮೇಲೆ, ಆ ಮೂಕನು ಮಾತನಾಡಿದನು. ಜನರು ಆಶ್ಚರ್ಯಪಟ್ಟು, “ಇಂಥದ್ದನ್ನು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ,” ಎಂದು ಹೇಳಿದರು.


ಜನರೆಲ್ಲರೂ ಬೆರಗಾಗಿ, “ಇದೆಂಥಾ ಮಾತಾಗಿದೆ! ಈತನು ಅಧಿಕಾರದಿಂದಲೂ ಶಕ್ತಿಯಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆಕೊಡಲು ಅವು ಹೊರಗೆ ಬರುತ್ತವಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು. ಯೇಸು ಅವರ ಮುಂದಾಗಿ ಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಯೇಸುವಿನ ಹಿಂದೆ ಬರುತ್ತಿದ್ದವರು ಭಯಪಟ್ಟರು. ಯೇಸು ತಮ್ಮ ಹನ್ನೆರಡು ಮಂದಿಯನ್ನು ತಿರುಗಿ ಕರೆದು ತನಗೆ ಸಂಭವಿಸುವ ಸಂಗತಿಗಳನ್ನು ಅವರಿಗೆ ಹೇಳಲಾರಂಭಿಸಿದರು:


ಶಿಷ್ಯರು ಯೇಸುವಿನ ಮಾತುಗಳಿಗೆ ಬೆರಗಾದರು. ಆದರೆ ಯೇಸು ತಿರುಗಿ ಅವರಿಗೆ, “ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ.


ಏಕೆಂದರೆ ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು’ ಎಂದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ, ‘ಬಾ’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿದನು.


ಅಶುದ್ಧಾತ್ಮವು ಅವನನ್ನು ಉಗ್ರವಾಗಿ ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂತು.


ಕೂಡಲೇ ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿನ ಪ್ರಾಂತದಲ್ಲೆಲ್ಲಾ ಹಬ್ಬಿತು.


ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದಾಗ, ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯುವಕನು ಬಲಗಡೆಯಲ್ಲಿ ಕುಳಿತಿರುವುದನ್ನು ಕಂಡು ಭಯಭ್ರಾಂತರಾದರು.


ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲಾದ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರೊ? ಅವರು ಜೀವಿತರಾಗಿ ಎದ್ದಿದ್ದಾರೆ! ಇಲ್ಲಿ ಇಲ್ಲ; ಅವರನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ.


ಆಗ ಅವರು ಪೌಲನನ್ನು ಕರೆದುಕೊಂಡು ಅರಿಯೊಪಾಗ ಎಂಬ ಸ್ಥಳಕ್ಕೆ ಬಂದು, “ನೀನು ಹೇಳುತ್ತಿರುವ ಈ ಹೊಸ ಉಪದೇಶ ಏನೆಂಬುದನ್ನು ನಾವು ತಿಳಿದುಕೊಳ್ಳಬಹುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು