ಮಾರ್ಕ 1:5 - ಕನ್ನಡ ಸಮಕಾಲಿಕ ಅನುವಾದ5 ಯೂದಾಯ ಪ್ರಾಂತದ ಎಲ್ಲಾ ಹಳ್ಳಿಗಳಿಂದ ಮತ್ತು ಯೆರೂಸಲೇಮ್ ನಗರದಿಂದ ಎಲ್ಲಾ ಜನರು ಅವನ ಬಳಿಗೆ ಬರುತ್ತಿದ್ದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜುದೇಯ ಪ್ರಾಂತ್ಯದ ಎಲ್ಲೆಡೆಗಳಿಂದಲೂ ಜೆರುಸಲೇಮಿನಿಂದಲೂ ಜನರು ಆತನ ಬಳಿಗೆ ಹೋಗುತ್ತಿದ್ದರು. ಅವರು ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಆತನಿಂದ ಸ್ನಾನದೀಕ್ಷೆ ಪಡೆದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇವಿುನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಜುದೇಯ ಮತ್ತು ಜೆರುಸಲೇಮಿನ ಜನರೆಲ್ಲರೂ ಯೋಹಾನನ ಬಳಿಗೆ ಬಂದು ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡರು. ಆಗ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಜುದೆಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಸಾಂದಿ-ಮುಲ್ಲ್ಯಾನಿತ್ನಾ, ಅನಿ ಜೆರುಜಲೆಮಾತ್ನಾ ಲೈ ಲೊಕಾ ಜುವಾಂವಾಕ್ಡೆ ಯೆವ್ನ್, ಅಪ್ನಾಚ್ಯಾ ಸಗ್ಳ್ಯಾ ಚುಕಾ ಒಳ್ಕುನ್ ಘೆವ್ನ್, ಜೊರ್ದಾನ್ ನ್ಹಯ್ತ್, ಜುಂವಾವಾಕ್ನಾ ಬಾಲ್ತಿಮ್ ಘೆವ್‍ಲಾಗಲ್ಲಿ. ಅಧ್ಯಾಯವನ್ನು ನೋಡಿ |