Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:7 - ಕನ್ನಡ ಸಮಕಾಲಿಕ ಅನುವಾದ

7 ಅವನು, “ನನಗಿಂತ ಶಕ್ತರೊಬ್ಬರು ನನ್ನ ನಂತರ ಬರುತ್ತಾರೆ, ಅವರ ಪಾದರಕ್ಷೆಗಳ ಪಟ್ಟಿಗಳನ್ನು ದಾಸನಂತೆ ಬಾಗಿ ಬಿಚ್ಚುವುದಕ್ಕೂ ನಾನು ಅರ್ಹನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆತನು, “ನನ್ನಾನಂತರ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ; ಬಗ್ಗಿ ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು - ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಬಾರನ್ನು ಬೊಗ್ಗಿಕೊಂಡು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೋಹಾನನು ಜನರಿಗೆ, “ನನ್ನ ತರುವಾಯ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ನಾನು ಮೊಣಕಾಲೂರಿ, ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಮಾಜೆನ್ಕಿ ಲೈ ಬಳ್‍ಹೊತ್ತೊ, ಎಕ್ಲೊ ಯೆತಲೊ ಹಾಯ್. ಡೊಗ್ಲಾ ಘಾಲುನ್ ತೆಚ್ಯಾ ಪಾಂಯಾತ್ಲ್ಯಾ ವ್ಹಾನಾಂಚಿ ನಾಡಿ ಸೊಡ್ತಲಿ ಸೈತ್ ಮಾಜಿ ಮರ್ಯಾದ್‍ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:7
11 ತಿಳಿವುಗಳ ಹೋಲಿಕೆ  

ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ, ‘ನನ್ನನ್ನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ಅವರು ನಾನಲ್ಲ, ಇಗೋ, ಅವರು ನನ್ನ ನಂತರ ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು.


ಅವರೇ ನನ್ನ ಬಳಿಕ ಬರುವವರು. ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.


ಯೋಹಾನನು ಉತ್ತರವಾಗಿ ಅವರೆಲ್ಲರಿಗೆ: “ನಾನಂತೂ ನಿಮಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತ ಶಕ್ತರೊಬ್ಬರು ಬರುತ್ತಾರೆ, ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವ ಗುಲಾಮನಾಗಿರುವುದಕ್ಕೂ ನಾನು ಯೋಗ್ಯನಲ್ಲ. ಅವರು ಪವಿತ್ರಾತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ದೀಕ್ಷಾಸ್ನಾನ ಮಾಡಿಸುವರು.


“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.


ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು.


ಆಗ ಅವಳು ಎದ್ದು ಬೋರಲು ಬಿದ್ದು, “ನಿನ್ನ ದಾಸಿಯಾದ ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದಳು.


ಯೋಹಾನನು ಒಂಟೆಯ ಕೂದಲಿನ ಉಡುಪನ್ನು ಧರಿಸಿ, ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.


ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಅವರು ನಿಮಗೆ ಪವಿತ್ರಾತ್ಮರಲ್ಲಿಯೇ ದೀಕ್ಷಾಸ್ನಾನ ಮಾಡಿಸುವರು,” ಎಂದು ಘೋಷಿಸುತ್ತಿದ್ದನು.


ಅದಕ್ಕೆ ಪೌಲನು, “ಯೋಹಾನನ ದೀಕ್ಷಾಸ್ನಾನವು ಪಶ್ಚಾತ್ತಾಪದ ದೀಕ್ಷಾಸ್ನಾನವಾಗಿತ್ತು. ತನ್ನ ನಂತರ ಬರಲಿರುವ ಯೇಸುವಿನಲ್ಲಿ ವಿಶ್ವಾಸವನ್ನಿಡಬೇಕೆಂದು ಯೋಹಾನನು ಜನರಿಗೆ ಹೇಳಿದನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು