Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:2 - ಕನ್ನಡ ಸಮಕಾಲಿಕ ಅನುವಾದ

2 ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಪರೀಕ್ಷಿಸುವುದಕ್ಕಾಗಿ ಯೇಸುವಿಗೆ, “ಒಬ್ಬ ಪುರುಷನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಫರಿಸಾಯರಲ್ಲಿ ಕೆಲವರು, ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಫರಿಸಾಯರು ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ - ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವದು ಧರ್ಮವೋ ಹೇಗೆ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೆಲವು ಫರಿಸಾಯರು ಯೇಸುವಿನ ಬಳಿಗೆ ಬಂದು ಆತನನ್ನು ಪರೀಕ್ಷಿಸಲು, “ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಸರಿಯೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಥೈ ಉಲ್ಲಿ ಫಾರಿಜೆವಾ ಯೆವ್ನ್, ಜೆಜುಚಿ ಪರಿಕ್ಷಾ ಕರುಕ್ ಮನುನ್ “ಎಕ್ ಘೊಮನ್ಸಾನ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ತಲ್ಯಾ ವಿಶಯಾತ್ ಅಮ್ಚೊ ಖಾಯ್ದೊ ಕಾಯ್ ಸಾಂಗ್ತಾ?” ಮನುನ್ ತೆಕಾ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:2
25 ತಿಳಿವುಗಳ ಹೋಲಿಕೆ  

ಅವರು ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ತಪ್ಪು ಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದರು.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಅವರಲ್ಲಿ ಕೆಲವರು ಕರ್ತದೇವರನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದಂತೆ, ನಾವೂ ಪರೀಕ್ಷಿಸದೆ ಇರೋಣ.


ಆಗ ಮುಖ್ಯಯಾಜಕರೂ ಫರಿಸಾಯರೂ ಯೇಸುವನ್ನು ಬಂಧಿಸುವಂತೆ ಆತನ ಸುಳಿವು ಯಾರಿಗಾದರೂ ತಿಳಿದಿದ್ದರೆ ಅವರು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.


ಆಗ ಮುಖ್ಯಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ, “ಈತನು ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?


ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಯೇಸುವನ್ನು ನಂಬಿದ್ದುಂಟೇ?


ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು.


ಆಗ ಹಣದಾಶೆಯಿಂದ ಕೂಡಿದ ಫರಿಸಾಯರು, ಇವುಗಳನ್ನು ಕೇಳಿ ಯೇಸುವನ್ನು ಪರಿಹಾಸ್ಯ ಮಾಡಿದರು.


ಆಗ ಕರ್ತದೇವರು ಅವನಿಗೆ, “ಫರಿಸಾಯರಾದ ನೀವು, ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.


ಆದರೆ ಫರಿಸಾಯರೂ ಮೋಶೆಯ ನಿಯಮ ಪಂಡಿತರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.


ಆಗ ಫರಿಸಾಯರೂ ನಿಯಮ ಬೋಧಕರೂ ಯೇಸುವಿಗೆ ವಿರೋಧವಾಗಿ ತಪ್ಪು ಕಂಡು ಹಿಡಿಯಬೇಕೆಂದು, ಅವರು ಆ ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಗಮನಿಸಿ ನೋಡುತ್ತಿದ್ದರು.


ಆದರೆ ಫರಿಸಾಯರೂ ಅವರ ಗುಂಪಿಗೆ ಸೇರಿದ ನಿಯಮ ಬೋಧಕರೂ ಯೇಸುವಿನ ವಿರೋಧವಾಗಿ ಗೊಣಗಾಡುತ್ತಾ ಶಿಷ್ಯರಿಗೆ, “ನೀವು ಏಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ?” ಎಂದು ಕೇಳಿದರು.


ಯೇಸು ಅವರಿಗೆ, “ಫರಿಸಾಯರ ಹುಳಿಹಿಟ್ಟಿನ ವಿಷಯದಲ್ಲಿಯೂ ಹೆರೋದನ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದಿರಿ,” ಎಂದು ಖಂಡಿತವಾಗಿ ಹೇಳಿದರು.


ಫರಿಸಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ಮಾಡಬೇಕೆಂದು ಕೇಳಿ, ಅವರೊಂದಿಗೆ ತರ್ಕಿಸುವುದಕ್ಕೆ ಆರಂಭಿಸಿದರು.


ಅವರಲ್ಲಿ ಮೋಶೆಯ ನಿಯಮ ಬೋಧಕನಾಗಿದ್ದ ಒಬ್ಬನು, ಯೇಸುವನ್ನು ಪರೀಕ್ಷಿಸುವುದಕ್ಕಾಗಿ,


ಫರಿಸಾಯರಲ್ಲಿ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಅವರ ಬಳಿಗೆ ಬಂದು, “ಒಬ್ಬ ಪುರುಷನು ಯಾವ ಕಾರಣದಿಂದಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.


ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.


ತರುವಾಯ ಯೇಸುವಿನ ಶಿಷ್ಯರು ಬಂದು, “ಫರಿಸಾಯರು ನಿಮ್ಮ ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿಮಗೆ ತಿಳಿಯಿತೇ?” ಎಂದು ಕೇಳಿದರು.


ಆದರೆ ಫರಿಸಾಯರು, “ದೆವ್ವಗಳ ಅಧಿಪತಿಯಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.


“ವಿವಾಹ ವಿಚ್ಛೇದನವನ್ನು ನಾನು ಹಗೆಮಾಡುತ್ತೇನೆ,” ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾನೆ. “ತನ್ನ ಹೆಂಡತಿಗೆ ನಂಬಿಕೆದ್ರೋಹ ಬಗೆದು, ದೌರ್ಜನ್ಯ ತೋರುವವನನ್ನು ನಾನು ಹಗೆಮಾಡುತ್ತೇನೆ,” ಎಂದು ಸರ್ವಶಕ್ತರಾದ ದೇವರು ಹೇಳುತ್ತಾರೆ. ಆದ್ದರಿಂದ ನೀವು ವಂಚನೆಯುಳ್ಳವರಾಗಿ ನಡೆಯದ ಹಾಗೆ ನಿಮ್ಮ ಆತ್ಮದಲ್ಲಿ ಎಚ್ಚರಿಕೆಯಾಗಿರಿ.


ಯೇಸು ಅಲ್ಲಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಜನರು ತಿರುಗಿ ಅವರ ಬಳಿಗೆ ಬರಲು, ಯೇಸು ತಮ್ಮ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದರು.


ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮಗೆ ಏನು ಅಪ್ಪಣೆಕೊಟ್ಟನು?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು