Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:21 - ಕನ್ನಡ ಸಮಕಾಲಿಕ ಅನುವಾದ

21 ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, “ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೇಸು ಅವನನ್ನು ದೃಷ್ಟಿಸಿನೋಡಿ ಪ್ರೀತಿಸಿ ಅವನಿಗೆ - ನಿನಗೆ ಒಂದು ಕಡಿಮೆಯಾಗಿದೆ; ಹೋಗು, ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು ಆ ಮನುಷ್ಯನನ್ನು ಪ್ರೀತಿಯಿಂದ ದೃಷ್ಟಿಸಿನೋಡಿ, “ನೀನು ಮಾಡಬೇಕಾದ ಕಾರ್ಯವೊಂದಿದೆ. ಹೋಗಿ, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ಇರುವುದು. ನಂತರ ಬಂದು, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜುನ್ ಪ್ರೆಮಾನ್ ತ್ಯಾ ಮಾನ್ಸಾಕ್ ಬಗಟ್ಲ್ಯಾನ್ ಅನಿ “ತಿಯಾ ಎಕ್ ಕರ್‍ತಲೆ ಹಾಯ್, ಜಾ ಅನಿ ತುಜೆಕ್ಡೆ ಹೊತ್ತೆ ಸಗ್ಳೆ ಇಕ್, ಅನಿ ಯೆಲ್ಲೆ ಪೈಸೆ ಗರಿಬಾಕ್ನಿ ದಿ, ಅನಿ ಸರ್‍ಗಾತ್ ತುಕಾ ಖರಿ ಸಾವ್ಕಾರ್ಕಿ ರ್‍ಹಾತಾ, ಮಾನಾ ಯೆ ಅನಿ ಮಾಜ್ಯಾ ಫಾಟ್ನಾ ಯೆ,” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:21
29 ತಿಳಿವುಗಳ ಹೋಲಿಕೆ  

ಆದರೂ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ ಎಂದು ನಿನ್ನ ವಿರುದ್ಧವಾಗಿ ಹೇಳುತ್ತೇನೆ.


ಆದರೆ ಬೇಕಾದದ್ದು ಕೆಲವೇ, ಅವಶ್ಯವಾಗಿರುವುದು. ಮರಿಯಳು ಆ ಉತ್ತಮ ಭಾಗವನ್ನೇ ಆರಿಸಿಕೊಂಡಿದ್ದಾಳೆ ಅದು ಆಕೆಯಿಂದ ಯಾರೂ ತೆಗೆಯಲಾಗುವುದಿಲ್ಲ,” ಎಂದು ಹೇಳಿದರು.


ಏಕೆಂದರೆ ಯಾವನಾದರೂ ಇಡೀ ಮೋಶೆಯ ನಿಯಮದಲ್ಲಿ ಒಂದೇ ಒಂದನ್ನು ಕೈಕೊಂಡು ನಡೆಯದೇ ಹೋದರೆ, ಅವನು ಇಡೀ ನಿಯಮವನ್ನೇ ಕೈಕೊಳ್ಳದ ಅಪರಾಧಿಯಾಗುತ್ತಾನೆ.


ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು.


ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.


ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.


ಯೇಸು ಜನರನ್ನೂ ಶಿಷ್ಯರನ್ನೂ ತಮ್ಮ ಬಳಿಗೆ ಕರೆದು ಅವರಿಗೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; ಆದರೆ ಅವುಗಳನ್ನು ಮಾರಬೇಡ.


ತರುವಾಯ ಯೇಸು ಯೆರೂಸಲೇಮ ಪಟ್ಟಣವನ್ನೂ ಅದರ ಸ್ಥಿತಿಯನ್ನೂ ಕಂಡು, ಅದರ ಸಲುವಾಗಿ ಅತ್ತು,


ಯೇಸು ಅವರೆಲ್ಲರಿಗೆ: “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಯೇಸು ಅವನಿಗೆ, “ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು.


ನಾನಂತೂ ನನಗಿರುವುದೆಲ್ಲವನ್ನೂ ನಿಮ್ಮ ಆತ್ಮಗಳಿಗೋಸ್ಕರ ಬಹು ಸಂತೋಷದಿಂದ ವೆಚ್ಚಮಾಡುತ್ತೇನೆ. ನನ್ನನ್ನು ಕೂಡ ನಿಮಗೋಸ್ಕರ ವೆಚ್ಚಮಾಡಲು ಸಿದ್ಧನಾಗಿದ್ದೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.


ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು.


ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ, ಆ ಕಾರ್ಯವನ್ನು ಮಾಡುವುದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.


ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು